AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಟೀಮ್ ಇಂಡಿಯಾಗೆ ಎಂಟ್ರಿ: ತಲೆ ಕೆಳಗಾದ LSG ಮತ್ತು SRH ಲೆಕ್ಕಾಚಾರ

IPL 2025 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು. ಈ ಆರು ಪ್ಲೇಯರ್ಸ್​ಗಳಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಅಂದರೆ ಇಲ್ಲಿ ರಾಷ್ಟ್ರೀಯ ತಂಡದ ಪರ ಆಡದ ಅಥವಾ ರಾಷ್ಟ್ರೀಯ ತಂಡದ ಪರ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Oct 07, 2024 | 10:20 AM

Share
ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಯುವ ವೇಗಿ ಮಯಾಂಕ್ ಯಾದವ್ ಹಾಗೂ ಆಲ್​ರೌಂಡರ್ ನಿತೀಶ್ ರೆಡ್ಡಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಈ ಪಾದಾರ್ಪಣೆಯೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಮೆಗಾ ಹರಾಜು ರಿಟೈನ್ ಲೆಕ್ಕಾಚಾರಗಳು ತಲೆ ಕೆಳಗಾಗಿದೆ.

1 / 5
ಏಕೆಂದರೆ ನಿತೀಶ್ ರೆಡ್ಡಿ ಅವರನ್ನು ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಳ್ಳುವ ಇರಾದೆಯಲ್ಲಿತ್ತು. ಆದರೀಗ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಕಾರಣ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡುವಂತಿಲ್ಲ. ಬದಲಾಗಿ ರಾಷ್ಟ್ರೀಯ ತಂಡದ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ.

2 / 5
ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ಪರ ಕಳೆದ ಸೀಸನ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಮಯಾಂಕ್ ಯಾದವ್ ಕೂಡ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವ ಸಾಧ್ಯತೆಯಿತ್ತು. ಇದೀಗ ಟೀಮ್ ಇಂಡಿಯಾ ಮಯಾಂಕ್ ಕಣಕ್ಕಿಳಿದಿರುವ ಕಾರಣ ಅವರನ್ನು ಸಹ ರಾಷ್ಟ್ರೀಯ ತಂಡದ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಬೇಕಾಗುತ್ತದೆ.

3 / 5
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಐಪಿಎಲ್ ನಿಯಮದ ಪ್ರಕಾರ, ಅನ್​ಕ್ಯಾಪ್ಡ್ ಆಟಗಾರರನ್ನು ಕೇವಲ 4 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂಬುದು. ಆದರೀಗ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಕಾರಣ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ.ಗೆ ಏರಿಕೆಯಾಗಿದೆ.

4 / 5
ಇತ್ತ 4 ಕೋಟಿ ರೂ.ಗೆ ಯುವ ಆಟಗಾರರನ್ನು ಉಳಿಸಿಕೊಳ್ಳುವ ಯೋಜನೆಯಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದು, ಹೀಗಾಗಿ ಈ ಆಟಗಾರರನ್ನು ಮುಂಬರುವ ಐಪಿಎಲ್ ಮೆಗಾ ಹರಾಜಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಇವರಿಬ್ಬರನ್ನು ಉಳಿಸಿಕೊಳ್ಳಬೇಕಿದ್ದರೆ ತಲಾ ಕನಿಷ್ಠ 11 ಕೋಟಿ ರೂ. ನೀಡಲೇಬೇಕು. ಹೀಗಾಗಿಯೇ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

5 / 5
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್