ಇತ್ತ 4 ಕೋಟಿ ರೂ.ಗೆ ಯುವ ಆಟಗಾರರನ್ನು ಉಳಿಸಿಕೊಳ್ಳುವ ಯೋಜನೆಯಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದು, ಹೀಗಾಗಿ ಈ ಆಟಗಾರರನ್ನು ಮುಂಬರುವ ಐಪಿಎಲ್ ಮೆಗಾ ಹರಾಜಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಇವರಿಬ್ಬರನ್ನು ಉಳಿಸಿಕೊಳ್ಳಬೇಕಿದ್ದರೆ ತಲಾ ಕನಿಷ್ಠ 11 ಕೋಟಿ ರೂ. ನೀಡಲೇಬೇಕು. ಹೀಗಾಗಿಯೇ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.