MS Dhoni: ಧೋನಿಯನ್ನು ಬ್ಯಾನ್ ಮಾಡಬೇಕಿತ್ತು: ವೀರೇಂದ್ರ ಸೆಹ್ವಾಗ್

IPL 2025: ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಏಕೆಂದರೆ ಧೋನಿಯನ್ನು ರಿಟೈನ್ ಮಾಡಿಕೊಳ್ಳಲು ಸಿಎಸ್​ಕೆ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಅದರಂತೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳುವ ಸಾದ್ಯತೆಯಿದೆ.

|

Updated on: Aug 24, 2024 | 9:23 AM

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಐಪಿಎಲ್​ನಿಂದಲೇ ಬ್ಯಾನ್ ಮಾಡಬೇಕಿತ್ತು. ಇದರಿಂದ ಬೇರೆಯವರು ಪಾಠ ಕಲಿಯುತ್ತಿದ್ದರು. ಇಂತಹ ಅಚ್ಚರಿಯ ಹೇಳಿಕೆ ನೀಡಿದ್ದು ಮತ್ಯಾರೂ ಅಲ್ಲ, ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್.

1 / 6
ಅಷ್ಟಕ್ಕೂ ಧೋನಿಯನ್ನು ಸೆಹ್ವಾಗ್ ಬ್ಯಾನ್ ಮಾಡಬೇಕಿತ್ತು ಅಂದಿರುವುದು 2019ರಲ್ಲಿ ನಡೆದ ಘಟನೆಗೆ. 2019ರ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಮುನ್ನಡೆಸಿದ್ದ ಧೋನಿ ಮೈದಾನಕ್ಕೆ ನುಗ್ಗಿ ಅಂಪೈರ್​ ಜೊತೆ ವಾಗ್ವಾದ ನಡೆಸಿದ್ದರು. ಕ್ರಿಕ್​ಬಝ್​ ಸಂದರ್ಶನದಲ್ಲಿ ಈ ಘಟನೆಯನ್ನು ಪ್ರಸ್ತಾಪಿಸಿ ಮಾತನಾಡಿರುವ ಸೆಹ್ವಾಗ್, ಅಂದು ಧೋನಿಯನ್ನು ಬ್ಯಾನ್ ಮಾಡಬೇಕಿತ್ತು ಅಂದಿದ್ದಾರೆ.

2 / 6
2019ರ ಐಪಿಎಲ್​ ಪಂದ್ಯದಲ್ಲಿ ಸಿಎಸ್​ಕೆ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿತ್ತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದ ಕೊನೆಯ ಓವರ್​ನಲ್ಲಿ ಸಿಎಸ್​ಕೆ ತಂಡಕ್ಕೆ 18 ರನ್​ಗಳ ಅವಶ್ಯಕತೆಯಿತ್ತು. ಬೆನ್ ಸ್ಟೋಕ್ಸ್ ಎಸೆದ ಅಂತಿಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ 9 ರನ್​ಗಳು ಮೂಡಿಬಂದಿದ್ದವು.

3 / 6
4ನೇ ಎಸೆತವು ಫುಲ್ ಟಾಸ್ ರೂಪದಲ್ಲಿ ಮೂಡಿಬಂತು. ಲೆಗ್ ಅಂಪೈರ್ ನೋ ಬಾಲ್ ನೀಡಿರಲಿಲ್ಲ. ಇದರಿಂದ ಕುಪಿತಗೊಂಡ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಮೈದಾನಕ್ಕೆ ಆಗಮಿಸಿ ಅಂಪೈರ್ ಜೊತೆ ವಾಗ್ವಾದ ನಡೆಸಿದರು. ಇದರಿಂದಾಗಿ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತ್ತು. ಅಂದು ಮೈದಾನಕ್ಕೆ ಬಂದು ಅಂಪೈರ್ ಜೊತೆ ಮಾತಿನ ಚಕಮಕಿ ನಡೆಸಿದ ಧೋನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿತ್ತು.

4 / 6
ಈ ಘಟನೆಯ ಬಗ್ಗೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ಅಂದು ಧೋನಿಯ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಇದರಿಂದ ಅವರು ಸುಲಭವಾಗಿ ಹೊರಬಂದರು. ನನ್ನ ಪ್ರಕಾರ ಧೋನಿಯನ್ನು ಎರಡು ಮೂರು ಪಂದ್ಯಗಳಿಂದ ಬ್ಯಾನ್ ಮಾಡಬೇಕಿತ್ತು. ಏಕೆಂದರೆ ಧೋನಿ ಮಾಡಿರುವುದನ್ನು, ನಾಳೆ ಇನ್ನೊಬ್ಬ ನಾಯಕ ಮಾಡಬಹುದು.

5 / 6
ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಅಂಪೈರ್​ಗಳ ಮಾಲ್ಯವೇನು? ಎಂದು ವೀರೇಂದ್ರ ಸೆಹ್ವಾಗ್ ಪ್ರಶ್ನಿಸಿದ್ದಾರೆ. ಹೀಗಾಗಿಯೇ ಮೈದಾನಕ್ಕೆ ನುಗ್ಗಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದ ಸಿಎಸ್​ಕೆ ನಾಯಕನನ್ನು ಕೆಲ ಪಂದ್ಯಗಳಿಂದ ಅಮಾನತುಗೊಳಿಸಬೇಕಾಗಿತ್ತು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

6 / 6
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ