IPL 2025: ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಕಣಕ್ಕಿಳಿಯಲಿದ್ದಾರಾ? ಈ ಬಿಲಿಯನ್ ಡಾಲರ್ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅದು ಸಹ ಚೆನ್ನೈ ಸೂಪರ್ ಕಿಂಗ್ಸ್ ಪರ ಧೋನಿ ರಿಟೈನ್ ಆಗಲಿದ್ದಾರೆ ಎಂಬ ಸಿಹಿ ಸುದ್ದಿಯೊಂದಿಗೆ. ಅಂದರೆ ಎಂಎಸ್ಡಿ ಮುಂದಿನ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.
ಮಹೇಂದ್ರ ಸಿಂಗ್ ಧೋನಿ ಮುಂಬರುವ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಖಚಿತಪಡಿಸಿದ್ದಾರೆ. ಧೋನಿ ಆಡಲು ಸಿದ್ಧರಿರುವಾಗ ಅದಕ್ಕಿಂತ ನಮಗೆ ಇನ್ನೇನು ಬೇಕು. ಅದುವೇ ದೊಡ್ಡ ಸಂತೋಷ ಎಂದು ಕಾಸಿ ವಿಶ್ವನಾಥನ್ ಹೇಳಿದ್ದಾರೆ.
ಇದರೊಂದಿಗೆ ಸಿಎಸ್ಕೆ ತಂಡದಲ್ಲಿ ಧೋನಿ ಕಾಣಿಸಿಕೊಳ್ಳುವುದು ಕನ್ಫರ್ಮ್ ಆಗಿದೆ. ಇದರ ಜೊತೆಗೆ ಅವರನ್ನು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಅಂದರೆ ಕೇವಲ 4 ಕೋಟಿ ರೂ.ಗೆ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಿದ್ದಾರೆ.
ಐಪಿಎಲ್ ಮೆಗಾ ಹರಾಜಿನ ನಿಯಮಗಳ ಪ್ರಕಾರ, ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಹೊರಗುಳಿದು 5 ವರ್ಷಗಳ ಕಳೆದಿದ್ದರೆ ಅವರನ್ನು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅದರಂತೆ ಇದೀಗ ಧೋನಿ ನಿವೃತ್ತರಾಗಿ 5 ವರ್ಷ ಕಳೆದಿವೆ. ಹೀಗಾಗಿ ಸಿಎಸ್ಕೆ ಮಹೇಂದ್ರ ಸಿಂಗ್ ಧೋನಿಯನ್ನು ಅನ್ಕ್ಯಾಪ್ಡ್ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ.
ಇಲ್ಲಿ ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವ ಆಟಗಾರರಿಗೆ ಕೇವಲ 4 ಕೋಟಿ ರೂ. ಮಾತ್ರ ನೀಡಿದರೆ ಸಾಕು. ಇದರಿಂದ ಒಟ್ಟು ಹರಾಜು ಮೊತ್ತದಲ್ಲಿ ಹೆಚ್ಚುವರಿ ಕಡಿತವನ್ನು ತಡೆಯಬಹುದು. ಇದೀಗ ಧೋನಿ ರಿಟೈನ್ಗೆ ಒಪ್ಪಿರುವುದರಿಂದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೇವಲ 4 ಕೋಟಿ ರೂ.ಗೆ ಸ್ಟಾರ್ ಆಟಗಾರನನ್ನು ತಂಡದಲ್ಲೇ ಉಳಿಸಿಕೊಳ್ಳಲು ಸಾಧ್ಯವಾಗಲಿದೆ.