ಅಂದರೆ ಮಹೇಂದ್ರ ಸಿಂಗ್ ಧೋನಿಯನ್ನು ಸಿಎಸ್ಕೆ ಕಳೆದ ಸೀಸನ್ ಹರಾಜಿನ 12 ಕೋಟಿ ರೂ. ನೀಡಿ ಉಳಿಸಿಕೊಂಡಿತ್ತು. ಆದರೆ ಈ ಬಾರಿ ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡರೆ ಕೇವಲ 4 ಕೋಟಿ ರೂ. ಮಾತ್ರ ನೀಡಿದರೆ ಸಾಕು. ಇತ್ತ ಧೋನಿಯನ್ನು ಅನ್ಕ್ಯಾಪ್ಡ್ ಪಟ್ಟಿಯಲ್ಲಿ ಉಳಿಸಿಕೊಂಡರೆ, ಮತ್ತೋರ್ವ ರಾಷ್ಟ್ರೀಯ ಆಟಗಾರನನ್ನು ದೊಡ್ಡ ಮೊತ್ತ ನೀಡಿ ಉಳಿಸಿಕೊಳ್ಳುವ ಅವಕಾಶ ಸಿಎಸ್ಕೆ ತಂಡಕ್ಕೆ ದೊರೆಯಲಿದೆ.