IPL 2025: ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಕೈ ಹಿಡಿದ ಮುಂಬೈ ಇಂಡಿಯನ್ಸ್

IPL 2025: ಐಪಿಎಲ್ 2021 ರಿಂದ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ. ಇದರ ನಡುವೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ ಅವರ ಪುತ್ರ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 26, 2024 | 1:00 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ 182 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ  ಅರ್ಜುನ್ ತೆಂಡೂಲ್ಕರ್ ಕೂಡ ಸೇರಿದ್ದಾರೆ. ಈ ಬಾರಿ ಕೂಡ ಅರ್ಜುನ್ ಅವರ ಕೈ ಹಿಡಿದದ್ದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

1 / 5
ಪ್ರತಿ ಸೀಸನ್​​ನಂತೆ ಈ ಬಾರಿ ಕೂಡ ಕನಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ವಿಶೇಷ ಎಂದರೆ ಕಳೆದ 5 ಸೀಸನ್​​ಗಳಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೊರತುಪಡಿಸಿ ಜೂನಿಯರ್ ತೆಂಡೂಲ್ಕರ್ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

2 / 5
ಇನ್ನು ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಅರ್ಜುನ್ ತೆಂಡೂಲ್ಕರ್​​ಗಾಗಿ ಬಿಡ್ ಮಾಡಿದ ಏಕೈಕ ತಂಡವೆಂದರೆ ಗುಜರಾತ್ ಟೈಟಾನ್ಸ್. 2022ರ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರ ಮೊತ್ತವನ್ನು ಗುಜರಾತ್ ಟೈಟಾನ್ಸ್ 25 ಲಕ್ಷ ರೂ.ಗೆ ಏರಿಸಿದ್ದರು. ಇದಾದ ಬಳಿಕ 30 ಲಕ್ಷ ರೂ.ಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು.

3 / 5
ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಮೊದಲ ಸುತ್ತಿನಲ್ಲಿ ಮಾರಾಟವಾಗಿರಲಿಲ್ಲ. ಆದರೆ ಅಂತಿಮ ಸುತ್ತಿನಲ್ಲಿ ಅರ್ಜುನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಆಸಕ್ತಿ ತೋರಿಸಿತು. ಅದರಂತೆ ಬೇಸ್ ಪ್ರೈಸ್​ಗೆ ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪಾಲಾಗಿ ದ್ದಾರೆ.

4 / 5
2021 ರಿಂದ ಐಪಿಎಲ್​​​ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಮೊದಲೆರಡು ಸೀಸನ್​ಗಳಲ್ಲಿ ಮುಂಬ ಇಂಡಿಯನ್ಸ್ ಪರ ಬೆಂಚ್ ಕಾದಿದ್ದರು. ಇನ್ನು 2023 ಮತ್ತು 2024 ರಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಜೂನಿಯರ್ ತೆಂಡೂಲ್ಕರ್ 3 ವಿಕೆಟ್ ಕಬಳಿಸಿದ್ದಾರೆ. ಇದೀಗ ಮತ್ತೆ ಮುಂಬೈ ತಂಡಕ್ಕೆ ಆಯ್ಕೆಯಾಗಿರುವ ಜೂನಿಯರ್ ತೆಂಡೂಲ್ಕರ್ ಈ ಬಾರಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್