IPL 2025: ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳುವ ನಾಲ್ವರು ಆಟಗಾರರು ಇವರಂತೆ..!

Updated on: Oct 17, 2024 | 11:05 AM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಆ ನಾಲ್ವರು ಆಟಗಾರರು ಯಾರೆಲ್ಲಾ ಎಂಬುದರ ಮಾಹಿತಿ ಇಲ್ಲಿದೆ...

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಇದೀಗ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಈ ಆಟಗಾರರನ್ನು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಇದೀಗ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಈ ಆಟಗಾರರನ್ನು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

2 / 6

ಅದರಂತೆ ಮುಂಬೈ ಇಂಡಿಯನ್ಸ್ ಮುಂದಿನ ಸೀಸನ್​ಗಾಗಿ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳುವುದು ಕನ್ಫಮ್​ ಎನ್ನಲಾಗಿದೆ. ರೋಹಿತ್ ಶರ್ಮಾ ಅವರನ್ನು ಮೊದಲ ರಿಟೈನ್ ಆಗಿ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ ಐಪಿಎಲ್ 2025 ರಲ್ಲೂ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

3 / 6

ಹಾಗೆಯೇ ಜಸ್​ಪ್ರೀತ್ ಬುಮ್ರಾ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ. ಬುಮ್ರಾ ಅವರಿಗೂ ಬೃಹತ್ ಮೊತ್ತದ ಸಂಭಾವನೆಯ ಆಫರ್ ನೀಡಲಾಗಿದೆ. ಹೀಗಾಗಿ ಯಾರ್ಕರ್ ಸ್ಪೆಷಲಿಸ್ಟ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.

4 / 6

ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಕಳೆದ ಸೀಸನ್​ನಲ್ಲಿ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ರಿಟೈನ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ನಿರ್ಧರಿಸಿದೆ.

5 / 6

ಅದೇ ರೀತಿ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ. ಟೀಮ್ ಇಂಡಿಯಾ ಟಿ20 ತಂಡದ ನಾಯಕನಿಗೆ ಬೃಹತ್ ಮೊತ್ತದ ಆಫರ್ ನೀಡಲಾಗಿದ್ದು, ಹೀಗಾಗಿ ಸೂರ್ಯಕುಮಾರ್ ಕೂಡ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬರುವುದಿಲ್ಲ ಎಂಬುದು ಖಚಿತವಾಗಿದೆ.

6 / 6

ಅದರಂತೆ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ ಎಂದು ಎಕ್ಸ್​ಪ್ರೆಸ್ ಸ್ಪೋರ್ಟ್ ವರದಿ ಮಾಡಿದೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us