IPL 2025: ಮುಂಬೈ ಇಂಡಿಯನ್ಸ್ ರಿಟೈನ್ ಮಾಡಿದ 6 ಆಟಗಾರರ ಪಟ್ಟಿ ಇಲ್ಲಿದೆ
IPL 2025 Retention: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಗರಿಷ್ಠ ಸಂಖ್ಯೆಯ ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅದರಲ್ಲೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಆರು ಆಟಗಾರರಲ್ಲಿ ಐವರು ಕ್ಯಾಪ್ಟ್ ಪ್ಲೇಯರ್ಸ್ ಇದ್ದರೆ, ಓರ್ವ ಅನ್ಕ್ಯಾಪ್ಡ್ ಆಟಗಾರ. ಅವರೆಂದರೆ....
2 / 7
ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇದರಿಂದಾಗಿ ಮುಂದಿನ ಸೀಸನ್ನಲ್ಲೂ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
3 / 7
ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲೂ ತವರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ ಹಿಟ್ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಮುಂದಿನ ಸೀಸನ್ನಲ್ಲೂ ಮುಂಬೈ ಪರ ಕಾಣಿಸಿಕೊಳ್ಳಲು ರೋಹಿತ್ ಶರ್ಮಾ ಬಯಸಿದ್ದಾರೆ.
4 / 7
ಜಸ್ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಪ್ರಮುಖ ವೇಗಿಯಾಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹಾಗಾಗಿ ಮುಂಬೈ ಪರ ಬುಮ್ರಾ ಯಾರ್ಕರ್ ಮುಂದುವರೆಯಲಿದೆ.
5 / 7
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಿದ್ದಾರೆ. ಹೀಗಾಗಿ ಸೂರ್ಯ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.
6 / 7
ತಿಲಕ್ ವರ್ಮಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್ನಲ್ಲೂ ತಿಲಕ್ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ.
7 / 7
ನಮನ್ ಧಿರ್: ಮುಂಬೈ ಇಂಡಿಯನ್ಸ್ ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ 24 ವರ್ಷದ ಆಲ್ರೌಂಡರ್ ನಮನ್ ಧಿರ್ ಅವರನ್ನು ರಿಟೈನ್ ಮಾಡಿಕೊಂಡಿದೆ. ನಮನ್ ಧಿರ್ ಕಳೆದ ಸೀಸನ್ನಲ್ಲಿ ಮುಂಬೈ ಪರ 7 ಪಂದ್ಯಗಳನ್ನಾಡಿದ್ದರು. ಇದೀಗ ಮುಂದಿನ ಸೀಸನ್ಗೂ ಪಂಜಾಬ್ ಮೂಲದ ಯುವ ಆಟಗಾರನನ್ನು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಸಿಕೊಂಡಿದೆ.