IPL 2025: ಮುಂಬೈ ಇಂಡಿಯನ್ಸ್ಗೆ ಈಗ ರೋಹಿತ್ ಶರ್ಮಾ ಬೇಕೇ ಬೇಕು..!
IPL 2025: ಐಪಿಎಲ್ 2025 ಸೀಸನ್ಗಾಗಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ 10 ಫ್ರಾಂಚೈಸಿಗಳಿಗೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಆಯ್ಕೆ ನೀಡುವ ಸಾಧ್ಯತೆಯಿದೆ. ಈ ಆಯ್ಕೆಯೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾ ಸೇರಿದಂತೆ ನಾಲ್ವರು ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಗಾಗಿ ಮೆಗಾ ಹರಾಜು ನಡೆಯಲಿದೆ. ಈ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೂ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ನಡುವೆ ರೋಹಿತ್ ಶರ್ಮಾ (Rohit Sharma) ಅವರನ್ನು ರಿಲೀಸ್ ಮಾಡದಿರಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
2 / 5
ಕಳೆದ ಸೀಸನ್ನಲ್ಲಿ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿತ್ತು. ಇದರ ಬೆನ್ನಲ್ಲೇ ಇದು ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಅವರ ಕೊನೆಯ ಸೀಸನ್ ಎಂಬ ಸುದ್ದಿಗಳು ಹರಿದಾಡಿದ್ದವು.
3 / 5
ಆದರೀಗ ಹಿಟ್ಮ್ಯಾನ್ನನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ಕೊರತೆಯಿದೆ. ಇತ್ತ ಹಿಟ್ಮ್ಯಾನ್ರನ್ನು ಕೈ ಬಿಟ್ಟರೆ ಅದು ತಂಡದ ಬ್ರಾಂಡ್ ಮೇಲೆ ಪರಿಣಾಮ ಬೀರುವುದು ಖಚಿತ. ಇದಕ್ಕೆ ಸಾಕ್ಷಿ, ಕಳೆದ ಬಾರಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಪರ ಕಂಡು ಬಂದ ಭಾರೀ ಬೆಂಬಲ.
4 / 5
ಇದೀಗ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿ ರೋಹಿತ್ ಶರ್ಮಾ ಮತ್ತಷ್ಟು ಕ್ರೇಝ್ ಹೆಚ್ಚಿಸಿದ್ದಾರೆ. ಹೀಗಾಗಿ ಹಿಟ್ಮ್ಯಾನ್ರನ್ನು ತಂಡದಿಂದ ಬಿಡುಗಡೆ ಮಾಡಿದರೆ, ಅದು ಫ್ರಾಂಚೈಸಿ ಬ್ರಾಂಡ್ ಮೇಲೂ ಭಾರೀ ಪರಿಣಾಮ ಬೀರಲಿದೆ. ಹಾಗಾಗಿ ಮೆಗಾ ಹರಾಜಿಗೂ ಮುನ್ನವೇ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಯೋಜನೆ ರೂಪಿಸಿದೆ.
5 / 5
ಅದರಂತೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಐಪಿಎಲ್ 2025 ರಲ್ಲೂ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.