Updated on: Oct 23, 2024 | 8:34 AM
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈ ಸಿದ್ಧತೆಗಳ ನಡುವೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಆಟಗಾರ ಪಾರ್ಥೀವ್ ಪಟೇಲ್ ಅವರನ್ನು ಕರೆತಂದಿದ್ದಾರೆ ಎಂದು ವರದಿಯಾಗಿದೆ. ಅದು ಸಹ ಕೋಚಿಂಗ್ ಸಿಬ್ಬಂದಿಯಾಗಿ ಎಂಬುದು ವಿಶೇಷ.
ಐಪಿಎಲ್ 2025 ರಲ್ಲಿ ಪಾರ್ಥೀವ್ ಪಟೇಲ್ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟಿಂಗ್ ಮೆಂಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡದ ಮೆಂಟರ್ ಆಗಿ ಗ್ಯಾರಿ ಕಸ್ಟರ್ನ್ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಪಾರ್ಥೀವ್ ಪಟೇಲ್ ಅವರನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
ಪಾರ್ಥೀವ್ ಪಟೇಲ್ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಸ್ಕೌಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು. ಈ ಮೂಲಕ ಯುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ತವರು ಫ್ರಾಂಚೈಸಿ ಗುಜರಾತ್ ಟೈಟಾನ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಲು ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಮುಂದಾಗಿದ್ದಾರೆ.
ಅಂದಹಾಗೆ ಪಾರ್ಥೀವ್ ಪಟೇಲ್ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದಾರೆ. ಈ ವೇಳೆ ಮೂರು ಬಾರಿ ಚಾಂಪಿಯನ್ಸ್ ತಂಡಗಳ ಭಾಗವಾಗಿದ್ದರು.
2008 ರಲ್ಲಿ ಸಿಎಸ್ಕೆ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಪಾರ್ಥೀವ್ ಪಟೇಲ್ ಒಟ್ಟು 139 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ಅರ್ಧಶತಕಗಳೊಂದಿಗೆ ಒಟ್ಟು 2848 ರನ್ ಕಲೆಹಾಕಿದ್ದಾರೆ. 2019 ರಲ್ಲಿ ಕೊನೆಯ ಬಾರಿ ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದ ಅವರು ಆ ಬಳಿಕ ಮುಂಬೈ ಇಂಡಿಯನ್ಸ್ ತಂಡ ಸೌಟ್ಕಿಂಗ್ ಟೀಮ್ನ ಭಾಗವಾಗಿದ್ದರು. ಇದೀಗ ಬ್ಯಾಟಿಂಗ್ ಮೆಂಟರ್ ಹುದ್ದೆಯೊಂದಿಗೆ ಗುಜರಾತ್ ಟೈಟಾನ್ಸ್ ಜೊತೆ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದಾರೆ.