AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಯಾರು?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಆದರೀಗ ಪಂತ್ ಲಕ್ನೋ ಸೂಪರ್ ಜೈಂಟ್ಸ್ ಪಾಲಾಗಿದ್ದಾರೆ. ಇದೀಗ ಹೊಸ ನಾಯಕನ ಹುಡುಕಾಟದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮುಂದೆ ಮೂರು ಆಯ್ಕೆಗಳಿವೆ...

ಝಾಹಿರ್ ಯೂಸುಫ್
|

Updated on: Dec 01, 2024 | 9:03 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ 5 ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಈ ಐದು ತಂಡಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಒಂದು. ಆದರೆ ಡೆಲ್ಲಿ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ತಂಡದಲ್ಲಿ ಮೂವರು ಸ್ಟಾರ್ ಆಟಗಾರರಿದ್ದಾರೆ. ಈ ಮೂವರು ಸಹ ನಾಯಕತ್ವದ ಅನುಭವ ಹೊಂದಿರುವವರು.

1 / 5
ಅದರಲ್ಲೂ ಕಳೆದ ಸೀಸನ್​​​ನಲ್ಲಿ ಎರಡು ತಂಡಗಳನ್ನು ಮುನ್ನಡೆಸಿದ ಇಬ್ಬರು ಮಾಜಿ ನಾಯಕರುಗಳು ಈಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಪಡೆಯ ಸಾರಥ್ಯ ಯಾರಿಗೆ ದೊರೆಯಲಿದೆ ಎಂಬುದೇ ಕುತೂಹಲ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಪಟ್ಟದ ರೇಸ್​​ನಲ್ಲಿರುವ ಆಟಗಾರರೆಂದರೆ…

2 / 5
ಕೆಎಲ್ ರಾಹುಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿಯ ಮೆಗಾ ಹರಾಜಿನ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಬರೋಬ್ಬರಿ 14 ಕೋಟಿ ರೂ.ಗೆ ಖರೀದಿಸಿದೆ. ಅತ್ತ ವಿಕೆಟ್ ಕೀಪರ್, ಆರಂಭಿಕನಾಗಿರುವ ರಾಹುಲ್ ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್​​ನಲ್ಲಿ 64 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು  ಭಾರತೀಯ ಆಟಗಾರನಿಗೆ ನಾಯಕತ್ವ ನೀಡಲು ಮುಂದಾದರೆ ಕೆಎಲ್ ರಾಹುಲ್​ಗೆ ಕ್ಯಾಪ್ಟನ್ ಪಟ್ಟ ದೊರೆಯುವುದು ಖಚಿತ.

3 / 5
ಫಾಫ್ ಡುಪ್ಲೆಸಿಸ್: ಕಳೆದ ಸೀಸನ್​​ನಲ್ಲಿ ಆರ್​​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ. 2 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಿರುವ ಫಾಫ್ ನಾಯಕತ್ವದ ಆಕಾಂಕ್ಷಿ. ಏಕೆಂದರೆ ಫಾಫ್ ಐಪಿಎಲ್​​ನಲ್ಲಿ 42 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಸೌತ್ ಆಫ್ರಿಕಾ ತಂಡವನ್ನು ಮುನ್ನಡೆಸಿದ ಅನುಭವವು ಕೂಡ ಅವರ ಜೊತೆಗಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಅನುಭವಿ ನಾಯಕನ ಮೊರೆ ಹೋದರೆ ಫಾಫ್​​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ.

4 / 5
ಅಕ್ಷರ್ ಪಟೇಲ್: ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಅಕ್ಷರ್ ಪಟೇಲ್ ಅವರನ್ನು ಬರೋಬ್ಬರಿ 16.5 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಈ ರಿಟೈನ್ ಬೆನ್ನಲ್ಲೇ ಅಕ್ಷರ್​​ಗೆ ಕ್ಯಾಪ್ಟನ್ ಪಟ್ಟ ದೊರೆಯಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಅಕ್ಷರ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಆಲ್​​ರೌಂಡರ್​​ಗೆ ಕ್ಯಾಪ್ಟನ್ ಸ್ಥಾನ ನೀಡಲು ಮುಂದಾದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ಅಕ್ಷರ್ ಪಟೇಲ್ ಪಾಲಾಗಲಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್