
ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ರಿಟೈನ್ ಆಟಗಾರರ ಪಟ್ಟಿ ಸಿದ್ಧವಾಗಿದೆಯಾ? ಇಂತಹದೊಂದು ಸಂಶಯಕ್ಕೆ ಕಾರಣ ಪಂಜಾಬ್ ಕಿಂಗ್ ಫ್ರಾಂಚೈಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋ. ಈ ಫೋಟೋದಲ್ಲಿ ಆಟಗಾರರನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.

ಈ 2 ಗುಂಪುಗಳಲ್ಲಿ ಒಂದೆಡೆ 20 ಆಟಗಾರರಿದ್ದರೆ, ಮತ್ತೊಂದೆಡೆ ಐವರು ಆಟಗಾರರ ಫೋಟೋಗಳನ್ನು ಬಳಸಲಾಗಿದೆ. ವಿಶೇಷ ಎಂದರೆ 20 ಆಟಗಾರರ ಫೋಟೋಗಳ ಪಟ್ಟಿ ಕೆಳಗೆ ಧನ್ಯವಾದಗಳನ್ನು ತಿಳಿಸಲಾಗಿದೆ. ಹೀಗಾಗಿಯೇ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹಂಚಿಕೊಂಡಿರುವ ಫೋಟೋ ಪ್ರಕಾರ, ಮುಂಬರುವ ಸೀಸನ್ಗಾಗಿ ಹರ್ಷಲ್ ಪಟೇಲ್, ಕಗಿಸೊ ರಬಾಡ, ಶಶಾಂಕ್ ಸಿಂಗ್, ಸ್ಯಾಮ್ ಕರನ್ ಹಾಗೂ ಅರ್ಷದೀಪ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಇಲ್ಲಿ ಮೂವರು ಭಾರತೀಯರಿದ್ದರೆ, ಇಬ್ಬರು ವಿದೇಶಿ ಆಟಗಾರರಾಗಿ ರಬಾಡ ಹಾಗೂ ಸ್ಯಾಮ್ ಕರನ್ ಕಾಣಿಸಿಕೊಂಡಿದ್ದಾರೆ.

ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ 5 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ನೀಡಲಿದೆ ಎಂದು ವರದಿಯಾಗಿತ್ತು. ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಐವರು ಆಟಗಾರರ ಫೋಟೋವನ್ನು ಪ್ರತ್ಯೇಕವಾಗಿರಿಸಿರುವುದರಿಂದ ಈ ಪ್ಲೇಯರ್ಸ್ಗಳನ್ನು ರಿಟೈನ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಮೆಗಾ ಆಕ್ಷನ್ಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡದಿಂದ ನಾಯಕ ಶಿಖರ್ ಧವನ್ ಹೊರಬೀಳುವುದು ಖಚಿತ. ಏಕೆಂದರೆ ಕೆಲ ದಿನಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಧವನ್, ಇದೀಗ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಲೀಗ್ನಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್ಗೆ ಅನರ್ಹರಾಗಲಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್ನಲ್ಲಿ ಶಿಖರ್ ಧವನ್ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

2024ರ ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಾಝ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಸ್ಯಾಮ್ ಕರನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹರ್ , ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ರೈಲಿ ರೊಸ್ಸೊವ್.