AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ಫ್ರಾಂಚೈಸಿಗೆ ಮರಳಿದ ರವಿಚಂದ್ರನ್ ಅಶ್ವಿನ್

R Ashwin: 2008 ರಿಂದ 2015 ರವರೆಗೆ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಇದಾದ ಬಳಿಕ ಪಂಜಾಬ್ ಕಿಂಗ್ಸ್ (ಕಿಂಗ್ಸ್ ಇಲೆವೆನ್ ಪಂಜಾಬ್), ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವ ಅಶ್ವಿನ್ ಅವರನ್ನು ಇದೀಗ ಪ್ರಮುಖ ಹುದ್ದೆಗೆ ಸಿಎಸ್​ಕೆ ಫ್ರಾಂಚೈಸಿ ನೇಮಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jun 06, 2024 | 1:54 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 6
ಕಳೆದ ಜೂನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದರು. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ.

2 / 6
ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 6
ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು

ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!

4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!

ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ

ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್

‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು

ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ

ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!

ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ