- Kannada News Photo gallery Cricket photos IPL 2025: Rahul Dravid likely to Coach For Rajasthan Royals
IPL 2025: ರಾಜಸ್ಥಾನ್ ರಾಯಲ್ಸ್ಗೆ ರಾಹುಲ್ ದ್ರಾವಿಡ್ ಕೋಚ್: ವರದಿ
Rahul Dravid: ರಾಹುಲ್ ದ್ರಾವಿಡ್ ಐಪಿಎಲ್ನಲ್ಲಿ ಏಕೈಕ ತಂಡದ ಪರ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ಪರ ಎಂಬುದು ವಿಶೇಷ. ಇದೀಗ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿರುವ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿದೆ.
Updated on:Aug 10, 2024 | 10:39 AM

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕವಾಗಿದ್ದಾರೆ. ಕಳೆದ ಸೀಸನ್ನಲ್ಲಿ ಆರ್ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಆದರೆ ಐಪಿಎಲ್ 2025ರಲ್ಲಿ ಈ ಜವಾಬ್ದಾರಿಯಲ್ಲಿ ರಾಹುಲ್ ದ್ರಾವಿಡ್ಗೆ ವಹಿಸಲಾಗಿದೆ. ಅದರಂತೆ ಮುಂಬರುವ ಐಪಿಎಲ್ ಸೀಸನ್ನಲ್ಲಿ ಆರ್ಆರ್ ತಂಡದ ಮುಖ್ಯ ಕೋಚ್ ಆಗಿ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ.

ಕ್ರಿಕ್ಬಝ್ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಮತ್ತೊಂದೆಡೆ ಕಳೆದ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ RR ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಪುನರ್ ನೇಮಕ ಮಾಡುವ ಸಾಧ್ಯತೆಯಿದೆ.

ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್ಆರ್ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದಾರೆ.

ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿರುವುದು ವಿಶೇಷ.
Published On - 10:03 am, Sat, 10 August 24




