IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ

IPL 2025 Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು.

ಝಾಹಿರ್ ಯೂಸುಫ್
|

Updated on: Nov 26, 2024 | 7:41 AM

ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

1 / 5
ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

2 / 5
ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

3 / 5
ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

4 / 5
ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

5 / 5
Follow us