- Kannada News Photo gallery Cricket photos IPL 2025: RCB might release Faf du Plessis and Glenn Maxwell: Reports
IPL 2025: KGF ಅಧ್ಯಾಯ ಮುಕ್ತಾಯ… RCB ಯಿಂದ ಇಬ್ಬರು ರಿಲೀಸ್: ವರದಿ
IPL 2025: ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡದಲ್ಲಿ ಕೆಜಿಎಫ್ ಜೋಡಿಗಳು ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಮುಂಬರುವ ಸೀಸನ್ಗಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ರಿಲೀಸ್ ಮಾಡಲು ಆರ್ಸಿಬಿ ನಿರ್ಧರಿಸಿದೆ. ಹೀಗಾಗಿ ಐಪಿಎಲ್ 2025 ರಲ್ಲಿ KGF ಕಮಾಲ್ ಅನ್ನು ಎದುರು ನೋಡುವಂತಿಲ್ಲ.
Updated on: Sep 08, 2024 | 9:00 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ರಿಲೀಸ್ ಮಾಡಿದ್ದಾರೆ. ಹೀಗಾಗಿ ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಮುಂಬರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF (ಕೊಹ್ಲಿ, ಗ್ಲೆನ್, ಫಾಫ್) ಜೋಡಿ ಬೇರ್ಪಟ್ಟಂತಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಆರ್ಸಿಬಿ ತಂಡದ ಕೆಜಿಎಫ್ ಜೋಡಿಗಳಾಗಿ ಗುರುತಿಸಿಕೊಂಡಿದ್ದರು. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ.

ಅಲ್ಲದೆ ಮುಂಬರುವ ಸೀಸನ್ನಲ್ಲಿ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆಯಿದೆ. 2022 ರಿಂದ ಆರ್ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು. ಅಲ್ಲದೆ 45 ಪಂದ್ಯಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿರುವ ಫಾಫ್ 15 ಅರ್ಧಶತಕಗಳೊಂದಿಗೆ ಒಟ್ಟು 1636 ರನ್ ಕಲೆಹಾಕಿದ್ದಾರೆ.

ಇದಾಗ್ಯೂ ಫಾಫ್ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳದಿರಲು ಮುಖ್ಯ ಕಾರಣ ಅವರ ವಯಸ್ಸು. ಏಕೆಂದರೆ ಈಗಾಗಲೇ 40 ವರ್ಷ ದಾಟಿರುವ ಅವರು ಮುಂಬರುವ ಸೀಸನ್ಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಅಲ್ಲದೆ ಭವಿಷ್ಯದ ದೃಷ್ಟಿಯಲ್ಲಿ ಈಗಲೇ ಆರ್ಸಿಬಿ ಬದಲಿ ನಾಯಕನನ್ನು ರೂಪಿಸಿಕೊಳ್ಳಬೇಕಿದೆ. ಹೀಗಾಗಿಯೇ ಫಾಫ್ ಡುಪ್ಲೆಸಿಸ್ ಅವರನ್ನು ಕೈ ಆರ್ಸಿಬಿ ಕೈ ಬಿಟ್ಟಿದೆ.

ಇನ್ನು ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಕೈ ಬಿಡುವ ನಿರ್ಧಾರಕ್ಕೆ ಮುಖ್ಯ ಕಾರಣ ಕಳೆದ ಸೀಸನ್ನಲ್ಲಿನ ಪ್ರದರ್ಶನ. ಐಪಿಎಲ್ 2024 ರಲ್ಲಿ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದರು. ಅದರಲ್ಲೂ ಒಂದೇ ಸೀಸನ್ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದರು. ಹೀಗಾಗಿಯೇ ಆರ್ಸಿಬಿ ಮ್ಯಾಕ್ಸ್ವೆಲ್ ಅವರನ್ನು ರಿಲೀಸ್ ಮಾಡಿದೆ.

ಇದರೊಂದಿಗೆ ಆರ್ಸಿಬಿ ತಂಡದ KGF ಬಳಗದಿಂದ G (ಗ್ಲೆನ್ ಮ್ಯಾಕ್ಸ್ವೆಲ್ ಮತ್ತು F (ಫಾಫ್ ಡುಪ್ಲೆಸಿಸ್) ಹೊರಬಿದ್ದಂತಾಗಿದೆ. ಈ ಇಬ್ಬರು ಸ್ಟಾರ್ ಆಟಗಾರರ ಬದಲಿಯಾಗಿ ಆರ್ಸಿಬಿ ತಂಡಕ್ಕೆ ಎಂಟ್ರಿ ಕೊಡುವ ದಾಂಡಿಗರು ಯಾರು ಎಂಬುದನ್ನು ತಿಳಿಯಲು ಮೆಗಾ ಹರಾಜಿನವರೆಗೆ ಕಾಯಲೇಬೇಕು.
