AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: KGF ಅಧ್ಯಾಯ ಮುಕ್ತಾಯ… RCB ಯಿಂದ ಇಬ್ಬರು ರಿಲೀಸ್: ವರದಿ

IPL 2025: ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡದಲ್ಲಿ ಕೆಜಿಎಫ್ ಜೋಡಿಗಳು ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಮುಂಬರುವ ಸೀಸನ್​ಗಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಲೀಸ್ ಮಾಡಲು ಆರ್​ಸಿಬಿ ನಿರ್ಧರಿಸಿದೆ. ಹೀಗಾಗಿ ಐಪಿಎಲ್ 2025 ರಲ್ಲಿ KGF ಕಮಾಲ್ ಅನ್ನು ಎದುರು ನೋಡುವಂತಿಲ್ಲ.

ಝಾಹಿರ್ ಯೂಸುಫ್
|

Updated on: Sep 08, 2024 | 9:00 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಲೀಸ್ ಮಾಡಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಮುಂಬರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 6
ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF (ಕೊಹ್ಲಿ, ಗ್ಲೆನ್, ಫಾಫ್) ಜೋಡಿ ಬೇರ್ಪಟ್ಟಂತಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದ ಕೆಜಿಎಫ್ ಜೋಡಿಗಳಾಗಿ ಗುರುತಿಸಿಕೊಂಡಿದ್ದರು. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ.

2 / 6
ಅಲ್ಲದೆ ಮುಂಬರುವ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆಯಿದೆ. 2022 ರಿಂದ ಆರ್​ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು. ಅಲ್ಲದೆ 45 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ಫಾಫ್ 15 ಅರ್ಧಶತಕಗಳೊಂದಿಗೆ ಒಟ್ಟು 1636 ರನ್ ಕಲೆಹಾಕಿದ್ದಾರೆ.

3 / 6
ಇದಾಗ್ಯೂ ಫಾಫ್ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳದಿರಲು ಮುಖ್ಯ ಕಾರಣ ಅವರ ವಯಸ್ಸು. ಏಕೆಂದರೆ ಈಗಾಗಲೇ 40 ವರ್ಷ ದಾಟಿರುವ ಅವರು ಮುಂಬರುವ ಸೀಸನ್​ಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಅಲ್ಲದೆ ಭವಿಷ್ಯದ ದೃಷ್ಟಿಯಲ್ಲಿ ಈಗಲೇ ಆರ್​ಸಿಬಿ ಬದಲಿ ನಾಯಕನನ್ನು ರೂಪಿಸಿಕೊಳ್ಳಬೇಕಿದೆ. ಹೀಗಾಗಿಯೇ ಫಾಫ್ ಡುಪ್ಲೆಸಿಸ್ ಅವರನ್ನು ಕೈ ಆರ್​ಸಿಬಿ ಕೈ ಬಿಟ್ಟಿದೆ.

4 / 6
ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಕೈ ಬಿಡುವ ನಿರ್ಧಾರಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿನ ಪ್ರದರ್ಶನ. ಐಪಿಎಲ್ 2024 ರಲ್ಲಿ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದರು. ಅದರಲ್ಲೂ ಒಂದೇ ಸೀಸನ್​ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದರು. ಹೀಗಾಗಿಯೇ ಆರ್​ಸಿಬಿ ಮ್ಯಾಕ್ಸ್​ವೆಲ್ ಅವರನ್ನು ರಿಲೀಸ್ ಮಾಡಿದೆ.

5 / 6
ಇದರೊಂದಿಗೆ ಆರ್​ಸಿಬಿ ತಂಡದ KGF ಬಳಗದಿಂದ G (ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು F (ಫಾಫ್ ಡುಪ್ಲೆಸಿಸ್) ಹೊರಬಿದ್ದಂತಾಗಿದೆ. ಈ ಇಬ್ಬರು ಸ್ಟಾರ್ ಆಟಗಾರರ ಬದಲಿಯಾಗಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಡುವ ದಾಂಡಿಗರು ಯಾರು ಎಂಬುದನ್ನು ತಿಳಿಯಲು ಮೆಗಾ ಹರಾಜಿನವರೆಗೆ ಕಾಯಲೇಬೇಕು.

6 / 6
Follow us
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ

ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ

ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ

ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್

ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ

ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ

ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?

ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ