CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

IPL 2025: ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್. ಈ ಎರಡೂ ತಂಡಗಳ ಪರ ಕೆಲವೇ ಕೆಲವು ಆಟಗಾರರು ಆಡಿದ್ದಾರೆ. ಇದೀಗ ಆರ್​ಸಿಬಿ ತಂಡದ ಭಾಗವಾಗಿರುವ ಅನೂಜ್ ರಾವತ್ ಕೂಡ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Sep 10, 2024 | 2:49 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಮೆಗಾ ಹರಾಜಿಗಾಗಿ ರೂಪುರೇಷೆಗಳನ್ನು ರೂಪಿಸಲಾಗಿದೆ. ಅದರಂತೆ ಮುಂದಿನ ಸೀಸನ್​ಗೂ ಮುನ್ನ ಪ್ರತಿ ತಂಡಗಳಿಂದ ಬಹುತೇಕ ಆಟಗಾರರು ಹೊರಬೀಳಲಿದ್ದಾರೆ. ಅಂದರೆ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

1 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 ರಿಂದ ಆರ್​ಸಿಬಿ ತಂಡದಲ್ಲಿರುವ ವಿಕೆಟ್ ಕೀಪರ್ ಬ್ಯಾಟರ್ ಅನೂಜ್ ರಾವತ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಕಳೆದ ಮೂರು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿರುವ ರಾವತ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಈ ಬಾರಿ ಅನೂಜ್ ರಾವತ್ ರಾಯಲ್ ಬಳಗದಿಂದ ಹೊರಬೀಳುವುದು ಬಹುತೇಕ ಖಚಿತ.

2 / 5
ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಿಟೈನ್ ಮಾಡಿಕೊಳ್ಳದಿದ್ದರೆ ಮುಂದೇನು ಎಂಬ ಪ್ರಶ್ನೆಯೊಂದನ್ನು ಸ್ಪೋರ್ಟ್ಸ್​ ಯಾರಿ ಚಾನೆಲ್​ ಅನೂಜ್ ರಾವತ್ ಅವರ ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್​ಸಿಬಿ ಬ್ಯಾಟರ್, ನನಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

3 / 5
ಆರ್​ಸಿಬಿ ಇಲ್ಲದಿದ್ದರೆ, ನಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಬಯಸುತ್ತೇನೆ. ಏಕೆಂದರೆ ಸಿಎಸ್​ಕೆ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಅವರು ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಲ್ಲದೆ ಎಲ್ಲಾ ಆಟಗಾರರು ಅವರ ಬಗ್ಗೆ ಮಾತನಾಡುತ್ತಿರುತ್ತಾರೆ. ಹೀಗಾಗಿ ನನಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಬೇಕೆಂಬ ಆಸೆಯಿದೆ ಎಂದು ಅನೂಜ್ ರಾವತ್ ಹೇಳಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ.

4 / 5
ಅಂದಹಾಗೆ, 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಅನೂಜ್ ರಾವತ್ ಒಟ್ಟು 22 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 318 ರನ್ ಕಲೆಹಾಕಿದ್ದಾರೆ. ಅಂದರೆ ಅವರು ಆರ್​ಸಿಬಿ ಪರ ಕೇವಲ 19.88ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ. ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದಿಂದ ಅನೂಜ್ ರಾವತ್​ಗೆ ಗೇಟ್ ಪಾಸ್ ಸಿಗಲಿದೆ ಎನ್ನಬಹುದು.

5 / 5

Published On - 9:21 am, Tue, 10 September 24

Follow us
ಬಿಗ್ ಬಾಸ್​ಗೆ ಆಯ್ಕೆ ಆಗುವುದು ಹೇಗೆ? ಪ್ರಕ್ರಿಯೆ ವಿವರಿಸಿದ ಗೋಲ್ಡ್ ಸುರೇಶ್

ರವಿ ಮಾತಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬಹಳ ನೊಂದುಕೊಂಡಿದ್ದಾರೆ: ಸಿದ್ದರಾಮಯ್ಯ

ಆಸೀಸ್ ಮಾಧ್ಯಮಗಳ ಮೇಲೆ ಮುಗಿಬಿದ್ದ ವಿರಾಟ್ ಕೊಹ್ಲಿ

ಸಹ ಸ್ಪರ್ಧಿಗಳ ಸ್ವಿಮ್ಮಿಂಗ್ ಪೂಲ್​ಗೆ ತಳ್ಳಿದ ಮೋಕ್ಷಿತಾ, ರಜತ್

ಸಚಿವೆ ವಿರುದ್ಧ ಕೆಟ್ಟ ಪದವನ್ನು ನಾನು ಬಳಸಿಲ್ಲ, ದಾಖಲೆ ನೋಡಿ: ಸಿಟಿ ರವಿ

ಬಿಜೆಪಿ ಮುಖಂಡ ಯಾರ ಒತ್ತಾಸೆ ಮೇರೆಗೆ ಸಂಪರ್ಕಿಸಿದರೋ ಗೊತ್ತಿಲ್ಲ: ಕೃಷ್ಣ

ಮಲ್ಲಿಕಾರ್ಜುನ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ: ಬಸವರಾಜು

ನಿವೃತ್ತಿ ಬೆನ್ನಲ್ಲೇ ಟೀಮ್ ಇಂಡಿಯಾ ತೊರೆದ ಅಶ್ವಿನ್​ಗೆ ಅದ್ಧೂರಿ ಸ್ವಾಗತ

ಸಿದ್ದರಾಮಯ್ಯ ಸಹ ಬಂಗಾರಪ್ಪ ಹಾಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ: ಮಧು

ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್