
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಈ ರಿಟೈನ್ಗೂ ಕೆಲ ನಿಯಮಗಳು ಅನ್ವಯವಾಗಲಿದೆ. ಅಂದರೆ ಇಲ್ಲಿ ಮುಖ್ಯವಾಗಿ ಭಾರತೀಯ ಮತ್ತು ವಿದೇಶಿ ಆಟಗಾರರ ರಿಟೈನ್ಗೆ ಮಿತಿ ಇರಲಿದೆ.

ಅದರಲ್ಲೂ ಭಾರತೀಯ ಆಟಗಾರರ ಪಟ್ಟಿಯಲ್ಲಿ ಓರ್ವ ಅನ್ಕ್ಯಾಪ್ಡ್ ಆಟಗಾರನನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಿಂದ ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬುದೇ ಪ್ರಶ್ನೆ.

ಏಕೆಂದರೆ ಆರ್ಸಿಬಿ ತಂಡದಲ್ಲಿರುವ ಬಹುತೇಕ ಆಟಗಾರರು ಅನ್ಕ್ಯಾಪ್ಡ್. ಅಂದರೆ ಈವರೆಗೆ ಭಾರತದ ಪರ ಒಂದೇ ಒಂದು ಪಂದ್ಯವಾಡದ ಆಟಗಾರರು. ಇದಾಗ್ಯೂ ಆರ್ಸಿಬಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ಈ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಿಲ್ಲ ಎಂಬುದೇ ಸತ್ಯ.

ಆರ್ಸಿಬಿ ತಂಡದಲ್ಲಿರುವ ಅನ್ಕ್ಯಾಪ್ಡ್ ಆಟಗಾರರಲ್ಲಿ ಪ್ರಮುಖರೆಂದರೆ ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್, ಅನೂಜ್ ರಾವತ್, ಸುಯಶ್ ಪ್ರಭುದೇಸಾಯಿ, ಯಶ್ ದಯಾಳ್, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರರ್, ಸ್ವಪ್ನಿಲ್ ಸಿಂಗ್.

ಆದರೆ ಇವರು ಯಾರೂ ಸಹ ಆರ್ಸಿಬಿ ಪರ ಕಣಕ್ಕಿಳಿದು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇದಾಗ್ಯೂ ಈ ಬಾರಿಯ ಮಹಾರಾಜ ಟಿ20 ಟೂರ್ನಿಯಲ್ಲಿ ಕನ್ನಡಿಗ ಮನೋಜ್ ಭಾಂಡಗೆ ಭರ್ಜರಿ ಪ್ರದರ್ಶನ ನೀಡಿದ್ದರು. ಅತ್ತ ಡೆಲ್ಲಿ ಪ್ರೀಮಿಯರ್ ಲೀಗ್ನಲ್ಲಿ ಅನೂಜ್ ರಾವತ್ ಕೂಡ ಮಿಂಚಿದ್ದರು.

ಹೀಗಾಗಿ ಇಲ್ಲಿ ಮನೋಜ್ ಭಾಂಡಗೆ ಅಥವಾ ಅನೂಜ್ ರಾವತ್ ಅವರನ್ನು ಆರ್ಸಿಬಿ ಫ್ರಾಂಚೈಸಿ ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಇನ್ನುಳಿದಂತೆ ವಿರಾಟ್ ಕೊಹ್ಲಿ ಆರ್ಸಿಬಿ ತಂಡದಲ್ಲಿ ರಿಟೈನ್ ಆಗುವುದು ಖಚಿತ ಎನ್ನಬಹುದು. ಹಾಗೆಯೇ ಮೊಹಮ್ಮದ್ ಸಿರಾಜ್, ರಜತ್ ಪಾಟಿದಾರ್ ಹಾಗೂ ವಿಲ್ ಜಾಕ್ಸ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳಬಹುದು.

ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.