AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಂದು ಫ್ರಾಂಚೈಸಿಯು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದೇ ಈಗ ಕುತೂಹಲ.

ಝಾಹಿರ್ ಯೂಸುಫ್
|

Updated on: Oct 19, 2024 | 8:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್​ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಲಾಗಿದೆ.

1 / 5
ಪಿಟಿಐ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.

2 / 5
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

3 / 5
ಹಾಗೆಯೇ ಆರ್​ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.

4 / 5
ಇನ್ನು ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಮ್ಯಾಕ್ಸಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್