IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ
IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಂದು ಫ್ರಾಂಚೈಸಿಯು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದೇ ಈಗ ಕುತೂಹಲ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್ನಲ್ಲೂ ಆರ್ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಲಾಗಿದೆ.
2 / 5
ಪಿಟಿಐ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್ಗಳಿಂದ ಆರ್ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.
3 / 5
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.
4 / 5
ಹಾಗೆಯೇ ಆರ್ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.
5 / 5
ಇನ್ನು ಕಳೆದ ಸೀಸನ್ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಆರ್ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಮ್ಯಾಕ್ಸಿ ಮುಂದಿನ ಸೀಸನ್ನಲ್ಲಿ ಆರ್ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.