IPL 2025: RCB ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಮಾಡಿ: ಕೈಫ್
IPL 2025 Rohit Sharma: ರೋಹಿತ್ ಶರ್ಮಾ ಮುಂಬರುವ ಐಪಿಎಲ್ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಕಳೆದ ಸೀಸನ್ನಲ್ಲಿ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದರು. ಇದರಿಂದ ನೊಂದಿರುವ ಹಿಟ್ಮ್ಯಾನ್ ಐಪಿಎಲ್ 2025 ರಲ್ಲಿ ಹೊಸ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.
1 / 6
IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.
2 / 6
ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.
3 / 6
ಖಾಸಗಿ ಚಾನೆಲ್ವೊಂದರ ಚಿಟ್ ಚಾಟ್ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.
4 / 6
ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.
5 / 6
ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.
6 / 6
ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.
Published On - 12:58 pm, Wed, 2 October 24