AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು: ವಾಸಿಂ ಅಕ್ರಮ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೂರನೇ ಬಾರಿ ಫೈನಲ್ ಆಡಿದೆ. 2009 ರಲ್ಲಿ ನಡೆದ ಫೈನಲ್​ನಲ್ಲಿ 6 ರನ್​ಗಳಿಂದ ಸೋತಿದ್ದ ಆರ್​ಸಿಬಿ 2011 ರಲ್ಲಿ ಹೀನಾಯ ಸೋಲನುಭವಿಸಿತ್ತು. ಇದಾದ ಬಳಿಕ 2016 ರಲ್ಲಿ ಮತ್ತೆ ಫೈನಲ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ರನ್​ಗಳಿಂದ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

ಝಾಹಿರ್ ಯೂಸುಫ್
|

Updated on: Aug 21, 2024 | 7:30 AM

Share
IPL 2025: ಐಪಿಎಲ್​​ನಲ್ಲಿ ಟ್ರೋಫಿ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕನಸು ಮುಂದುವರೆದಿದೆ. ಕಳೆದ 17 ವರ್ಷಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದ್ದ RCB ಅಂತಿಮ ಹಂತದಲ್ಲಿ ಎಡವಿತ್ತು. ಇದಾಗ್ಯೂ ಐಪಿಎಲ್ 2025 ರಲ್ಲಿ ಆರ್​ಸಿಬಿ ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ರಾಯಲ್ ಅಭಿಮಾನಿಗಳು.

1 / 8
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್​ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.

2 / 8
ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್​ಸಿಬಿ ಪ್ರತಿ ಸೀಸನ್​ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.

3 / 8
ಒಂದು ವೇಳೆ ಆರ್​ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್​ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

4 / 8
ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್​ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

5 / 8
ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

6 / 8
ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಮತ್ತೆ ಫೈನಲ್​​ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 58 ರನ್​ಗಳಿಂದ ಸೋತು ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.

7 / 8
ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಮೂರನೇ ಬಾರಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ​ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ