ಚೊಚ್ಚಲ ಟೆಸ್ಟ್​​ನಲ್ಲಿ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ RCB ಹುಡುಗ

Jacob Bethell: 21 ವರ್ಷದ ಜೇಕಬ್ ಬೆಥೆಲ್ ಇಂಗ್ಲೆಂಡ್ ತಂಡದ ಭರವಸೆಯ ಯುವ ಆಲ್​​ರೌಂಡರ್. ಈ ಬಾರಿಯ ಮೆಗಾ ಹರಾಜಿನಲ್ಲಿ ಬೆಥೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2.6 ಕೋಟಿ ರೂ.ಗೆ ಖರೀದಿಸಿದೆ. ಈ ಖರೀದಿ ಬೆನ್ನಲ್ಲೇ ಅಬ್ಬರ ಶುರು ಮಾಡಿರುವ ಜೇಕಬ್ ಈ ಬಾರಿಯ ಐಪಿಎಲ್​​ನಲ್ಲಿ ಸಂಚಲನ ಸೃಷ್ಟಿಸುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 01, 2024 | 8:19 AM

ಕ್ರೈಸ್ಟ್​​ಚರ್ಚ್​​ ಹ್ಯಾಗ್ಲಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಯುವ ದಾಂಡಿಗ ಜೇಕಬ್ ಬೆಥೆಲ್ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಚೊಚ್ಚಲ ಪಂದ್ಯದಲ್ಲೇ ಸಿಡಿಲಬ್ಬರದ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದ ದ್ವಿತೀಯ ಇನಿಂಗ್ಸ್​​ನಲ್ಲಿ ನ್ಯೂಝಿಲೆಂಡ್ ನೀಡಿದ 104 ರನ್​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ಆರಂಭಿಕ ಆಟಗಾರ ಝಾಕ್ ಕ್ರಾಲಿ (1) ಅವರ ವಿಕೆಟ್ ಬೇಗೆನೆ ಕಳೆದುಕೊಂಡಿತು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ಎಡಗೈ ದಾಂಡಿಗ ಬೆಥೆಲ್ ಸ್ಪೋಟಕ ಇನಿಂಗ್ಸ್ ಆಡಿದರು.

2 / 6
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಜೇಕಬ್ ಬೆಥೆಲ್ ಕೇವಲ 37 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​​​ಗೊಂದಿಗೆ ಅಜೇಯ 50 ರನ್ ಬಾರಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎಂಬ ದಾಖಲೆ ಬೆಥೆಲ್ ಪಾಲಾಯಿತು.

3 / 6
ಅದರಲ್ಲೂ ಮೊದಲ ಟೆಸ್ಟ್​​ನಲ್ಲೇ 135 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್​​ನಲ್ಲಿ ಬ್ಯಾಟ್ ಬೀಸಿ ಅರ್ಧಶತಕ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ ನ್ಯೂಝಿಲೆಂಡ್​​ನ ಟಿಮ್ ಸೌಥಿ ಅಗ್ರಸ್ಥಾನದಲ್ಲಿದ್ದಾರೆ. 2008 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್​​ನಲ್ಲಿ ಪಾದಾರ್ಪಣೆ ಮಾಡಿದ್ದ ಸೌಥಿ 40 ಎಸೆತಗಳಲ್ಲಿ 192.50 ಸ್ಟ್ರೈಕ್ ರೇಟ್​​ನಲ್ಲಿ 77 ರನ್ ಬಾರಿಸಿದ್ದರು.

4 / 6
ಇದೀಗ 16 ವರ್ಷಗಳ ಬಳಿಕ ಜೇಕಬ್ ಬೆಥೆಲ್ 135.13ರ ಸ್ಟ್ರೈಕ್ ರೇಟ್​​ನಲ್ಲಿ ಬ್ಯಾಟ್ ಬೀಸಿ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಚೊಚ್ಚಲ ಟೆಸ್ಟ್​​ ಪಂದ್ಯದಲ್ಲೇ ಸ್ಪೋಟಕ ಅರ್ಧಶತಕ ಸಿಡಿಸಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಹಾಗೂ ವಿಶ್ವದ 2ನೇ ಬ್ಯಾಟ್ಸ್​​ಮಮನ್ ಎಂಬ ವಿಶ್ವ ದಾಖಲೆಯನ್ನು ಬೆಥೆಲ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​​ನಲ್ಲಿ 348 ರನ್ ಕಲೆಹಾಕಿದರೆ, ಇಂಗ್ಲೆಂಡ್ 499 ರನ್​ಗಳಿಸಿತು. ದ್ವಿತೀಯ ಇನಿಂಗ್ಸ್​​ನಲ್ಲಿ ನ್ಯೂಝಿಲೆಂಡ್ ತಡವು 254 ರನ್​​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​​ನಲ್ಲಿ ಕೇವಲ 104 ರನ್​​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 8 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow us