Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ಯತ್ತ ರಿಷಭ್ ಪಂತ್ ಚಿತ್ತ

MS Dhoni - Rishabh Pant: 43 ವರ್ಷದ ಮಹೇಂದ್ರ ಸಿಂಗ್ ಧೋನಿ ಮುಂದಿನ ಸೀಸನ್​ನಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಇದಾಗ್ಯೂ ಅವರು ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಮೆಂಟರ್ ಅಥವಾ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿಯೇ ಹೊಸ ತಂಡವನ್ನು ಕಟ್ಟಲು ಧೋನಿ ಕೂಡ ತೆರೆಮರೆಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 21, 2024 | 12:30 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಹರಾಜಿನ ಸಿದ್ಧತೆಗಳು ಆರಂಭವಾದ ಬೆನ್ನಲ್ಲೇ, ಇತ್ತ ಐಪಿಎಲ್ ಸ್ಟಾರ್ ಆಟಗಾರರ ಲೆಕ್ಕಾಚಾರಗಳು ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಎಲ್ಲರ ಗಮನ ಸೆಳೆಯುತ್ತಿರುವುದು ರಿಷಭ್ ಪಂತ್. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

1 / 5
ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಸೂಚನೆಯ ಮೇರೆಗೆ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಅಂದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖರೀದಿಸುವ ಬಗ್ಗೆ ಪಂತ್​ಗೆ ಧೋನಿ ಮಾತುಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

2 / 5
ಇದೇ ಕಾರಣದಿಂದಾಗಿ ಇದೀಗ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ತ್ಯಜಿಸಿ, ಚೆನ್ನೈ ಸೂಪರ್ ಕಿಂಗ್ಸ್​​ ತಂಡದತ್ತ ಮುಖ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಹೆಸರು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರಿಷಭ್ ಪಂತ್ ಎಂಟ್ರಿ ಕೊಟ್ಟರೆ ನಾಯಕತ್ವ ಒಲಿಯುವುದು ಕೂಡ ಖಚಿತ. ಕಳೆದ ಸೀಸನ್​ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರುತುರಾಜ್ ಗಾಯಕ್ವಾಡ್ ಧೋನಿಯನ್ನು ಅವಲಂಭಿಸಿಯೇ ತಂಡವನ್ನು ಮುನ್ನಡೆಸಿದ್ದರು. ಇದರೊಂದಿಗೆ ಧೋನಿಯ ಬಳಿಕ ತಂಡವನ್ನು ಮುನ್ನಡೆಸಬಲ್ಲ ಸಮರ್ಥ ನಾಯಕನ ಅವಶ್ಯಕತೆ ಸಿಎಸ್​ಕೆ ತಂಡಕ್ಕಿದೆ ಎಂಬುದು ಫ್ರಾಂಚೈಸಿಗೂ ಮನದಟ್ಟದಾಗಿದೆ.

4 / 5
ಹೀಗಾಗಿಯೇ ರಿಷಭ್ ಪಂತ್ ಅವರ ಮೇಲೆ ಸಿಎಸ್​ಕೆ ಕಣ್ಣಿಟ್ಟಿದೆ. ಇಲ್ಲಿ ಪಂತ್ ಅವರ ಆಯ್ಕೆಯಿಂದ ಸಿಎಸ್​ಕೆ ಎರಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ. ಅಂದರೆ ಧೋನಿಯ ಸ್ಥಾನದಲ್ಲಿ ಹೊಸ ವಿಕೆಟ್ ಕೀಪರ್ ಹಾಗೂ ನಾಯಕನಾಗಿ ರಿಷಭ್ ಪಂತ್ ಅವರನ್ನು ಕಣಕ್ಕಿಳಿಸಬಹುದು. ಈ ಮೂಲಕ ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯನ್ನು ನೇಮಿಸಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ. ಅದರಂತೆ ಸಿಎಸ್​ಕೆ ತಂಡಕ್ಕೆ ಪಂತ್ ಎಂಟ್ರಿ ಕೊಟ್ಟರೆ ನಾಯಕನಾಗಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

5 / 5
Follow us
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು

ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ

ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್

ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ

ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್

‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ

ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್

ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ