IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ರಿಷಭ್ ಪಂತ್ ಔಟ್..?
IPL 2025: ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೆ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ರಿಟೈನ್ ಆಸಕ್ತಿ ಹೊಂದಿಲ್ಲ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಪಂತ್ ಅವರ ಹೆಸರು ಸಹ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಆರಂಭಕ್ಕೂ ಮುನ್ನವೇ ಬಿಗ್ ಅಪ್ಡೇಟ್ಗಳು ಹೊರಬೀಳುತ್ತಿವೆ. ಈ ಅಪ್ಡೇಟ್ಗಳ ನಡುವೆ ರಿಷಭ್ ಪಂತ್ (Rishab Pant) ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಮುನ್ನಲೆಗೆ ಬಂದಿದೆ. ಐಪಿಎಲ್ 2025 ರ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪಂತ್ ಬಯಸಿದ್ದು, ಹೀಗಾಗಿ ಮುಂದಿನ ಸೀಸನ್ನಲ್ಲಿ ಅವರು ಡೆಲ್ಲಿ ಪರ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.
2 / 5
ಇತ್ತೀಚೆಗಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ತಂಡದ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ ಅವರನ್ನು ತೆಗೆದು ಹಾಕಿದ್ದರು. ಈ ಸುದ್ದಿ ಬೆನ್ನಲ್ಲೇ ಇದೀಗ ನಾಯಕ ರಿಷಭ್ ಪಂತ್ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ.
3 / 5
2021 ರಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಆಗಿ ನೇಮಕವಾಗಿದ್ದರು. ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಪಂತ್ ತಮ್ಮ ನಾಯಕತ್ವದ ಕೌಶಲ್ಯಗಳನ್ನು ಪ್ರದರ್ಶಿಸಿದ್ದರು. ಇದಾಗ್ಯೂ ಅವರ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಮ್ಮೆಯೂ ಫೈನಲ್ಗೆ ಪ್ರವೇಶಿಸಿಲ್ಲ. ಅಲ್ಲದೆ ಕಳೆದ ಸೀಸನ್ನಲ್ಲಿ 6ನೇ ಸ್ಥಾನ ಅಲಂಕರಿಸಿತ್ತು.
4 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ರಿಕಿ ಪಾಂಟಿಂಗ್ ಅವರ ನಿರ್ಗಮನದೊಂದಿಗೆ, ರಿಷಬ್ ಪಂತ್ ಅವರ ಭವಿಷ್ಯದ ಬಗ್ಗೆ ವದಂತಿಗಳು ಹರಡಲು ಪ್ರಾರಂಭಿಸಿವೆ. ಅಲ್ಲದೆ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಪಂತ್ ಹೊಸ ತಂಡದ ಪರ ಕಣಕ್ಕಿಳಿಯಲು ಇಚ್ಛಿಸಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.
5 / 5
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೂಡ 2025ರ ಮೆಗಾ ಹರಾಜಿನ ಮೂಲಕ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ. ಇದರ ಮೊದಲ ಹೆಜ್ಜೆ ಎಂಬಂತೆ ರಿಕಿ ಪಾಂಟಿಂಗ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಿದ್ದಾರೆ. ಅಲ್ಲದೆ ಭಾರತೀಯ ಕೋಚ್ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಹೊಸ ತಂಡವನ್ನು ರೂಪಿಸಲು ಯೋಜನೆ ಹಾಕಿಕೊಂಡಿದ್ದಾರೆ. ಹೀಗಾಗಿ ರಿಷಭ್ ಪಂತ್ ಕೂಡ ತಂಡದಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.