AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಷಭ್ ಪಂತ್​ಗೆ 30 ಕೋಟಿ ರೂ: ಸುರೇಶ್ ರೈನಾ

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಪಟ್ಟಿಯ ಮೊದಲ ಸುತ್ತಿನಲ್ಲಿ 6 ಆಟಗಾರರು ಹರಾಜಾಗಲಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 21, 2024 | 10:08 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ದಾಖಲೆಯ ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ ಭವಿಷ್ಯ ನುಡಿದಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಪಂತ್ ಎರಡಂಕಿ ಕೋಟಿಯೊಂದಿಗೆ ಹರಾಜಾಗುವುದು ಖಚಿತ ಎಂದಿದ್ದಾರೆ.

1 / 5
ರಿಷಭ್ ಪಂತ್ ಅವರ ನಾಯಕತ್ವದ ಅನುಭವ, ಬ್ಯಾಟಿಂಗ್ ಪರಾಕ್ರಮ ಮತ್ತು ಬ್ರ್ಯಾಂಡ್ ಮೌಲ್ಯವನ್ನು ಪರಿಗಣಿಸಿ, ಅವರ ಖರೀದಿಗಾಗಿ ಬಿಡ್ಡಿಂಗ್ ವಾರ್​ ನಡೆಯುವುದು ಖಚಿತ. ಅಲ್ಲದೆ ಈ ಪೈಪೋಟಿಯಿಂದಾಗಿ ಅವರ ಮೊತ್ತ 25 ಕೋಟಿ ರೂ. ದಾಟಲಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

2 / 5
ನನ್ನ ಪ್ರಕಾರ ರಿಷಭ್ ಪಂತ್ ಅವರಿಗೆ 25 ರಿಂದ 30 ಕೋಟಿ ರೂ. ಸಿಗಬೇಕು. ಏಕೆಂದರೆ ಆಸ್ಟ್ರೇಲಿಯಾ ಆಟಗಾರರಿಗೆ ಬೃಹತ್ ಮೊತ್ತವನ್ನು ಪಾವತಿಸಲಾಗುತ್ತದೆ. ಇದೀಗ ಎಲ್ಲಾ ವಿಭಾಗಗಳಲ್ಲೂ ಉತ್ತಮವಾಗಿರುವ ಪಂತ್ ಕೂಡ ದೊಡ್ಡ ಮೊತ್ತ ಪಡೆಯಲು ಅರ್ಹರು. ಹೀಗಾಗಿ ರಿಷಭ್ ಪಂತ್ 30 ಕೋಟಿ ರೂ.ಗೆ ಹರಾಜಾಗುವ ನಿರೀಕ್ಷೆಯಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

3 / 5
ಇತ್ತ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಮೊದಲ ಹರಾಜು ಪಟ್ಟಿಯಲ್ಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಪಂತ್ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಈ ಪೈಪೋಟಿಯಿಂದಾಗಿ ರಿಷಭ್ ಪಂತ್ 25 ರಿಂದ 30 ಕೋಟಿ ರೂ. ಪಡೆದರೂ ಅಚ್ಚರಿಯಿಲ್ಲ.

4 / 5
ಅಂದಹಾಗೆ ಕಳೆದ ಸೀಸನ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆದಿದ್ದರು. ಇದೀಗ ವರ್ಷಗಳ ಬಳಿಕ ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ರಿಷಭ್ ಅವರ ಖರೀದಿಗಾಗಿ ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್, ಆರ್​ಸಿಬಿ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಮುಂಚೂಣಿಯಲ್ಲಿವೆ. ಹೀಗಾಗಿ ನವೆಂಬರ್ 24 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಪಂಟರ್ ಪಂತ್​ಗಾಗಿ ಬಿಡ್ಡಿಂಗ್ ವಾರ್ ನಡೆಯುವುದು ಖಚಿತ ಎನ್ನಬಹುದು.

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ