IPL 2025: ಡೆಲ್ಲಿ ಕ್ಯಾಪಿಟಲ್ಸ್ ತೊರೆಯುತ್ತಾರಾ ರಿಷಭ್ ಪಂತ್: ಸ್ಪಷ್ಟನೆ ನೀಡಿದ ಸೌರವ್ ಗಂಗೂಲಿ
IPL 2025: ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೆ ನಾಲ್ಕರಿಂದ ಆರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಈ ಹರಾಜಿಗೂ ಮುನ್ನ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆ ಎನ್ನಲಾಗಿತ್ತು. ಈ ಸುದ್ದಿಗಳಿಗೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ.
1 / 5
ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗೆ ಡಿಸಿ ಫ್ರಾಂಚೈಸಿಯ ನಿರ್ದೇಶಕ ಸೌರವ್ ಗಂಗೂಲಿ ಬ್ರೇಕ್ ಹಾಕಿದ್ದಾರೆ. ಅದು ಕೂಡ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎನ್ನುವ ಮೂಲಕ ಎಂಬುದು ವಿಶೇಷ.
2 / 5
ಇದಕ್ಕೂ ಮುನ್ನ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿತ್ತು.
3 / 5
ಆದರೀಗ ಈ ಎಲ್ಲಾ ಸುದ್ದಿಗಳನ್ನು ಸೌರವ್ ಗಂಗೂಲಿ ಅಲ್ಲೆಗೆಳೆದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಐಪಿಎಲ್ 2025 ರಲ್ಲಿ ತಂಡಕ್ಕಾಗಿ ಆಡುವುದನ್ನು ಮುಂದುವರಿಸಲಿದ್ದಾರೆ. ಅವರನ್ನು ಡಿಸಿ ಫ್ರಾಂಚೈಸಿ ಕೈ ಬಿಡುವುದಿಲ್ಲ ಎಂದು ದಾದಾ ಖಚಿತಪಡಿಸಿದ್ದಾರೆ.
4 / 5
ಇದರೊಂದಿಗೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗೆ ಬ್ರೇಕ್ ಬಿದ್ದಂತಾಗಿದೆ. ಅಲ್ಲದೆ ಮುಂಬರುವ ಸೀಸನ್ಗಾಗಿ ಡೆಲ್ಲಿ ಫ್ರಾಂಚೈಸಿ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಪಂತ್ ಹೆಸರು ಕೂಡ ಇರುವುದು ಕನ್ಫರ್ಮ್ ಆದಂತಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ ಎನ್ನಬಹುದು.
5 / 5
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ ಅವರನ್ನು ತೆಗೆದು ಹಾಕಲಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬಳಗದಲ್ಲಿ ಭಾರತೀಯ ತರಬೇತುದಾರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಸೌರವ್ ಗಂಗೂಲಿ ಸೇರಿದಂತೆ ಕೆಲ ಮಾಜಿ ಆಟಗಾರರ ಹೆಸರುಗಳು ಕೇಳಿ ಬರುತ್ತಿದ್ದು, ಹೀಗಾಗಿ ಐಪಿಎಲ್ 2025 ರಲ್ಲಿ ದಾದಾ ಡೆಲ್ಲಿ ತಂಡದ ಮುಖ್ಯ ಕೋಚ್ ಹುದ್ದೆ ಅಲಂಕರಿಸಿದರೂ ಅಚ್ಚರಿಪಡಬೇಕಿಲ್ಲ.