AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: LSG ತಂಡದ ಹಿಟ್​ ಲಿಸ್ಟ್​ನಲ್ಲಿ ರೋಹಿತ್ ಶರ್ಮಾ

IPL 2025 Rohit Sharma: ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ರೋಹಿತ್ ಶರ್ಮಾ ಅವರನ್ನು ಕಳೆದ ಸೀಸನ್​ನಲ್ಲಿ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಹೀಗಾಗಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಿಂದ ರೋಹಿತ್ ಶರ್ಮಾ ಹೊರಬರಲಿದ್ದು, ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on:Sep 01, 2024 | 12:31 PM

Share
ಒಂದೆಡೆ ಐಪಿಎಲ್ ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಮತ್ತೊಂದೆಡೆ ರೋಹಿತ್ ಶರ್ಮಾ ಅವರ ಮುಂದಿನ ನಡೆಯೇನು? ಎಂಬ ಕುತೂಹಲ ಮುಂದುವರೆದಿದೆ. ಕೆಲ ಮೂಲಗಳ ಮಾಹಿತಿ ಪ್ರಕಾರ ಹಿಟ್​ಮ್ಯಾನ್ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

1 / 7
ಇತ್ತ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬರುವುದನ್ನು ಹಲವು ಫ್ರಾಂಚೈಸಿಗಳು ಎದುರು ನೋಡುತ್ತಿದೆ. ಈ ಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಹೆಸರು ಮುಂಚೂಣಿಯಲ್ಲಿದೆ. ಇದಕ್ಕೆ ಮುಖ್ಯ ಕಾರಣ ಲಕ್ನೋ ಸೂಪರ್ ಜೈಂಟ್ಸ್ ಹೊಸ ತಂಡವನ್ನು ರೂಪಿಸಲು ಬಯಸಿರುವುದು.

2 / 7
ಅಂದರೆ ಮುಂಬರುವ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಇದಾಗ್ಯೂ ಎಲ್​ಎಸ್​ಜಿ ತಂಡದ ಮುಂದಿನ ನಾಯಕ ಯಾರೆಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇದರ ನಡುವೆ ಲಕ್ನೋ ಸೂಪರ್ ಜೈಂಟ್ಸ್ ಜೊತೆ ರೋಹಿತ್ ಶರ್ಮಾ ಹೆಸರು ಕೂಡ ತಳುಕು ಹಾಕಿಕೊಂಡಿದೆ.

3 / 7
ರೋಹಿತ್ ಶರ್ಮಾ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಅವರ ಖರೀದಿಗಾಗಿ ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿ 50 ಕೋಟಿ ರೂ. ಅನ್ನು ತೆಗೆದಿಡಲಿದ್ದಾರೆ ಎಂದು ವರದಿಯಾಗಿತ್ತು. ಈ ವರದಿಗಳ ನಡುವೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ನೀಡಿದ ಹೇಳಿಕೆಯು ಇದೀಗ ಎಲ್ಲರ ಗಮನ ಸೆಳೆದಿದೆ.

4 / 7
ಎಎನ್​ಐಗೆ ನೀಡಿದ ಸಂದರ್ಶನದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಅನ್ನು ಶ್ಲಾಘಿಸಿದ ಜಾಂಟಿ ರೋಡ್ಸ್, ಹಿಟ್​ಮ್ಯಾನ್ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರನ್ನು ಖರೀದಿಸಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಸಿದ್ಧವಾಗಿದೆ. ರೋಹಿತ್ ಶರ್ಮಾ ವಿಶ್ವದ ಶ್ರೇಷ್ಠ ಕ್ರಿಕೆಟಿಗ. ಅಂತಹ ಆಟಗಾರನ ಖರೀದಿಗೆ ಎಲ್​ಎಸ್​ಜಿ ಖಂಡಿತವಾಗಿಯೂ ಬಿಡ್ ಮಾಡಲಿದೆ ಎಂದು ಜಾಂಟಿ ರೋಡ್ಸ್ ಹೇಳಿದ್ದಾರೆ.

5 / 7
ಜಾಂಟಿ ರೋಡ್ಸ್​ ಅವರ ಈ ಹೇಳಿಕೆಯೊಂದಿಗೆ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಹಿಟ್​ ಲಿಸ್ಟ್​ನಲ್ಲಿ ರೋಹಿತ್ ಶರ್ಮಾ ಅವರ ಹೆಸರು ಇರುವುದು ಖಚಿತವಾಗಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಹಿಟ್​ಮ್ಯಾನ್ ಕಾಣಿಸಿಕೊಂಡರೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕನ ಖರೀದಿಗೆ LSG ಫ್ರಾಂಚೈಸಿ ಭರ್ಜರಿ ಪೈಪೋಟಿ ನಡೆಸುವುದಂತು ಖಚಿತ.

6 / 7
ಆದರೆ ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಗಳು ಕೂಡ ರೋಹಿತ್ ಶರ್ಮಾ ಅವರ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಭಾರೀ ಪೈಪೋಟಿ ನಡೆಯುವುದಂತು ದಿಟ. ಈ ಪೈಪೋಟಿಯಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

7 / 7

Published On - 12:30 pm, Sun, 1 September 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ