- Kannada News Photo gallery Cricket photos IPL 2025: Rohit Sharma recently visit to the Mumbai Indians office
IPL 2025: ಮುಂಬೈ ಇಂಡಿಯನ್ಸ್ ಆಫೀಸ್ನಲ್ಲಿ ರೋಹಿತ್ ಶರ್ಮಾ: ಕುತೂಹಲ ಮೂಡಿಸಿದ ಹಿಟ್ಮ್ಯಾನ್ ನಡೆ
IPL 2025: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಎಂಐ ಕಾರ್ಪೋರೇಟ್ ಆಫೀಸ್ಗೆ ಭೇಟಿ ನೀಡಿದ್ದಾರೆ. ನೀಲಿ ಲಂಬೋರ್ಘಿನಿ ಕಾರಿನಲ್ಲಿ ಆಗಮಿಸಿದ್ದ ಹಿಟ್ಮ್ಯಾನ್ ಅವರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಲಿದ್ದಾರೆಂಬ ಸುದ್ದಿಗಳು ಸಹ ಕೇಳಿಬರುತ್ತಿವೆ.
Updated on: Oct 12, 2024 | 11:21 AM

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್ನಲ್ಲಿ ಹಿಟ್ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.



















