IPL 2025: ಮುಂಬೈ ಇಂಡಿಯನ್ಸ್ ಆಫೀಸ್​ನಲ್ಲಿ ರೋಹಿತ್ ಶರ್ಮಾ: ಕುತೂಹಲ ಮೂಡಿಸಿದ ಹಿಟ್​ಮ್ಯಾನ್ ನಡೆ

|

Updated on: Oct 12, 2024 | 11:21 AM

IPL 2025: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಎಂಐ ಕಾರ್ಪೋರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ನೀಲಿ ಲಂಬೋರ್ಘಿನಿ ಕಾರಿನಲ್ಲಿ ಆಗಮಿಸಿದ್ದ ಹಿಟ್​ಮ್ಯಾನ್ ಅವರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಲಿದ್ದಾರೆಂಬ ಸುದ್ದಿಗಳು ಸಹ ಕೇಳಿಬರುತ್ತಿವೆ.

1 / 6
IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ MI ಆಫೀಸ್​ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

2 / 6
ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ತಮ್ಮ ನೀಲಿ ಲಂಬೋರ್ಘಿನಿ ಕಾರಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕಾರ್ಪೊರೇಟ್ ಆಫೀಸ್​ಗೆ ಭೇಟಿ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮಾಲೀಕರು ರಿಟೈನ್ ಬಗ್ಗೆ ಚರ್ಚಿಸಲು ರೋಹಿತ್ ಶರ್ಮಾ ಅವರನ್ನು ತಮ್ಮ ಆಫೀಸ್​ಗೆ ಕರೆಸಿದ್ದಾರೆ ಎಂದು ವರದಿಯಾಗಿದೆ.

3 / 6
ಇತ್ತ ಈ ಭೇಟಿಯ ಬೆನ್ನಲ್ಲೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಇಂತಹದೊಂದು ಸುದ್ದಿ ಹುಟ್ಟಿಕೊಳ್ಳಲು ಮುಖ್ಯ ಕಾರಣ ಹಿಟ್​ಮ್ಯಾನ್, ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು.

4 / 6
ಈ ಮೈದಾನವು ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದಲ್ಲಿದ್ದು, ಇದನ್ನು ಮುಂಬೈ ಇಂಡಿಯನ್ಸ್ ಆಟಗಾರರ ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಇದೀಗ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದರಿಂದ ಅವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

5 / 6
ಇದಕ್ಕೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಇದಕ್ಕೆ ಮುಖ್ಯ ಕಾರಣ, ಕಳೆದ ಸೀಸನ್​ನಲ್ಲಿ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಸ್ಥಾನ ನೀಡಿರುವುದು. ಇದರಿಂದ ಅಸಂತುಷ್ಟರಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿತ್ತು.

6 / 6
ಆದರೀಗ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ರಿಟೈನ್ ಪ್ರಕ್ರಿಯೆ ನಡೆಯುವ ಸಮಯದಲ್ಲಿ. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿಲ್ಲ ಎನ್ನಬಹುದು.