IPL 2025: ಎಲ್ಲಾ ನಾಯಕರುಗಳಿಗೆ ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್
IPL 2025: ಐಪಿಎಲ್ನ 18ನೇ ಆವೃತ್ತಿಯು ಮಾರ್ಚ್ 14 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 25 ರಂದು ಆಯೋಜಿಸಲು ನಿರ್ಧಿಸಲಾಗಿದೆ. ಇನ್ನು ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಕ್ಕಿದೆ. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲೇ ಮುಂಬೈ ಇಂಡಿಯನ್ಸ್ ಕಣಕ್ಕಿಳಿಯಲಿದ್ದು, ನಾಯಕತ್ವವನ್ನು ಬದಲಿಸುವ ಯಾವುದೇ ಆಲೋಚನೆಯಿಲ್ಲ ಎಂಬುದನ್ನು ಎಂಐ ಫ್ರಾಂಚೈಸಿ ಸ್ಪಷ್ಟಪಡಿಸಿದೆ.
2 / 6
ಇದರೊಂದಿಗೆ ಟೀಮ್ ಇಂಡಿಯಾ ನಾಯಕರುಗಳು ಹಾರ್ದಿಕ್ ಪಾಂಡ್ಯ ನಾಯಕತ್ವದ ಅಡಿಯಲ್ಲಿ ಆಡುವುದು ಸಹ ಖಚಿತವಾಗಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡದ ಕ್ಯಾಪ್ಟನ್ಗಳು ಬರೋಬ್ಬ ನಾಯಕನ ಕೆಳಗೆ ಆಡಲು ಸಜ್ಜಾಗಿದ್ದಾರೆ.
3 / 6
ಇಲ್ಲಿ ಟೀಮ್ ಇಂಡಿಯಾ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕರಾಗಿರುವ ರೋಹಿತ್ ಶರ್ಮಾ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಎರಡನೇ ಸೀಸನ್ ಆಡಲಿದ್ದಾರೆ. ಕಳೆದ ಬಾರಿ ಹಿಟ್ಮ್ಯಾನ್ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿತ್ತು. ಇದಾಗ್ಯೂ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇದೀಗ ಮತ್ತೊಮ್ಮೆ ಪಾಂಡ್ಯ ನಾಯಕತ್ವದಡಿಯಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.
4 / 6
ಇನ್ನು ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ. ಭಾರತ ಟಿ20 ತಂಡದ ಕ್ಯಾಪ್ಟನ್ ಆದ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್ ಆಡಲು ಸಜ್ಜಾಗಿರುವ ಸೂರ್ಯ ಕೂಡ ಹಾರ್ದಿಕ್ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವುದು ವಿಶೇಷ.
5 / 6
ಹಾಗೆಯೇ ಭಾರತ ಟೆಸ್ಟ್ ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದು, ಅವರು ಸಹ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲು ಸಜ್ಜಾಗಿದ್ದಾರೆ.
6 / 6
ಅಂದರೆ ಟೀಮ್ ಇಂಡಿಯಾದ ಕ್ಯಾಪ್ಟನ್ ಪಟ್ಟದಲ್ಲಿರುವ ಇಬ್ಬರು ಆಟಗಾರರು ಹಾಗೂ ಒಬ್ಬ ಉಪನಾಯಕ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ನಾಯಕನಲ್ಲದ ಆಟಗಾರನ ಕ್ಯಾಪ್ಟನ್ಸಿ ಅಡಿಯಲ್ಲಿ ಆಡಲು ಸಜ್ಜಾಗಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲೇ ಮೊದಲು ಎಂಬುದು ವಿಶೇಷ.