IPL 2025: ಐಪಿಎಲ್ಗೆ ಶಿಖರ್ ಧವನ್ ಗುಡ್ ಬೈ
TV9 Web | Updated By: ಝಾಹಿರ್ ಯೂಸುಫ್
Updated on:
Aug 27, 2024 | 8:09 AM
IPL 2025: ಐಪಿಎಲ್ನಲ್ಲಿ ಶಿಖರ್ ಧವನ್ ಈವರೆಗೆ 5 ತಂಡಗಳ ಪರ ಕಣಕ್ಕಿಳಿದಿದ್ದಾರೆ. 2008 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 222 ಪಂದ್ಯಗಳನ್ನಾಡಿದ್ದಾರೆ.
1 / 5
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.
2 / 5
ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ ಎನ್ಒಸಿ ಪತ್ರವನ್ನು ಪಡೆಯಬೇಕಾಗುತ್ತದೆ. ನಿರಾಕ್ಷೇಪಣಾ ಪತ್ರ ಪಡೆದರೆ ಅವರು ಐಪಿಎಲ್ ಆಡಲು ಅರ್ಹರಾಗಿರುವುದಿಲ್ಲ.
3 / 5
ಅಂದರೆ ಬಿಸಿಸಿಐ ನಿಯಮದ ಪ್ರಕಾರ ಐಪಿಎಲ್ ಆಡುವ ಭಾರತೀಯ ಆಟಗಾರರು ಯಾವುದೇ ಫ್ರಾಂಚೈಸಿ ಲೀಗ್ಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಇತರೆ ಲೀಗ್ಗಳಲ್ಲಿ ಕಾಣಿಸಿಕೊಂಡರೆ ಅವರು ಐಪಿಎಲ್ಗೆ ಅನರ್ಹರಾಗಲಿದ್ದಾರೆ. ಹೀಗಾಗಿಯೇ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರು ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
4 / 5
ಇದೀಗ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್ ಆಡಲು ಅನರ್ಹರಾಗಲಿದ್ದಾರೆ. ಹೀಗಾಗಿಯೇ ಶಿಖರ್ ಧವನ್ ಅವರ ಐಪಿಎಲ್ ಕೆರಿಯರ್ ಅಂತ್ಯವಾಗಿದೆ ಎಂದೇ ಹೇಳಬಹುದು.
5 / 5
ಐಪಿಎಲ್ನಲ್ಲಿ ಶಿಖರ್ ಧವನ್ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ ಒಟ್ಟು 222 ಮ್ಯಾಚ್ಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.