AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೂವರು ಆಟಗಾರರಿಗೆ 55 ಕೋಟಿ ರೂ. ನೀಡಿದ SRH

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ಫ್ರಾಂಚೈಸಿಯು ಆರು ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗೆ ಖರ್ಚು ಮಾಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Oct 17, 2024 | 10:25 AM

Share
IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

1 / 6
ಇಲ್ಲಿ ಎಸ್​ಆರ್​ಹೆಚ್ ತಂಡ ಮೊದಲ ರಿಟೈನ್ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್. ಕಳೆದೆರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಸೌತ್ ಆಫ್ರಿಕಾ ಆಟಗಾರ ಕ್ಲಾಸೆನ್ ಅವರನ್ನು ಬರೋಬ್ಬರಿ 23 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

2 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಎರಡನೇ ರಿಟೈನ್ ನಾಯಕ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​​ನಲ್ಲಿ ಎಸ್​ಆರ್​ಹೆಚ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿರುವ ಆಸ್ಟ್ರೇಲಿಯಾ ಆಟಗಾರನಿಗೆ 18 ಕೋಟಿ ರೂ. ನೀಡಲು ಎಸ್​ಆರ್​ಹೆಚ್ ಫ್ರಾಂಚೈಸಿ ಮುಂದಾಗಿದೆ.

3 / 6
ಹಾಗೆಯೇ ಮೂರನೇ ರಿಟೈನ್ ಆಗಿ ಅಭಿಷೇಕ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೇ ಉಳಿದುಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಎಸ್​ಆರ್​​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ಅಭಿಷೇಕ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದರು. ಹೀಗಾಗಿ ಅವರನ್ನು 14 ಕೋಟಿ ರೂ. ರಿಟೈನ್ ಮಾಡಿಕೊಳ್ಳಲು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ನಿರ್ಧರಿಸಿದೆ.

4 / 6
ಅಂದರೆ ಇಲ್ಲಿ ಮೂವರು ಆಟಗಾರರಿಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಒಟ್ಟು 55 ಕೋಟಿ ರೂ. ಅನ್ನು ವ್ಯಯಿಸಿದೆ. ಈ 55 ಕೋಟಿ ರೂ. ಅನ್ನು ಒಟ್ಟು ಹರಾಜು ಮೊತ್ತ 120 ಕೋಟಿ ರೂ.ಯಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಳಿ ಸದ್ಯ ಉಳಿದಿರುವುದು 65 ಕೋಟಿ ರೂ. ಮಾತ್ರ.

5 / 6
ಇತ್ತ ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಇದಕ್ಕಾಗಿ ಒಟ್ಟು 79 ಕೋಟಿ ರೂ. ಅನ್ನು ವ್ಯಯಿಸಬೇಕಾಗುತ್ತದೆ. ಅದರಂತೆ ಇದೀಗ 55 ಕೋಟಿ ರೂ. ಖರ್ಚು ಮಾಡಿರುವ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇನ್ನುಳಿದ 24 ಕೋಟಿಯಲ್ಲಿ ಮತ್ತೆ ಮೂವರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಹಿಗಾಗಿ ಮೆಗಾ ಹರಾಜಿಗೂ ಮುನ್ನ SRH ತಂಡದಲ್ಲಿ ಸ್ಟಾರ್ ಆಟಗಾರರ ರಿಟೈನ್ ಅನ್ನು ನಿರೀಕ್ಷಿಸಬಹುದು.

6 / 6

Published On - 10:23 am, Thu, 17 October 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!