ಈಗಾಗಲೇ ಟೀಮ್ ಇಂಡಿಯಾದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಅತ್ತ ಸೂರ್ಯನಿಗೆ ಕ್ಯಾಪ್ಟನ್ ಪಟ್ಟ ನೀಡಿದರೆ, ರೋಹಿತ್ ಶರ್ಮಾ ಮುಂಬೈ ಬಳಗದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ಗೆ ನಾಯಕತ್ವ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.