IPL 2025: ಮುಂಬೈ ಇಂಡಿಯನ್ಸ್​ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ?

|

Updated on: Oct 06, 2024 | 9:25 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ​​ (ಐಪಿಎಲ್) ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಒಂದು ಮ್ಯಾಚ್​ನಲ್ಲಿ ಮುನ್ನಡೆಸಿದ್ದಾರೆ. 2023 ರಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ಸೂರ್ಯ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಇದೀಗ ಐಪಿಎಲ್ 2025 ರಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ರಿಟೆನ್ಷನ್ ನಿಯಮಗಳನ್ನು ಪ್ರಕಟಿಸಲಾಗಿದೆ. ಈ ಧಾರಣ ನಿಯಮದ ಪ್ರಕಟಣೆ ಬೆನ್ನಲ್ಲೇ ಎಲ್ಲಾ ಫ್ರಾಂಚೈಸಿಗಳು ಇದೀಗ ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಈ ಸಿದ್ಧತೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದ ಚರ್ಚೆಗಳು ಕೂಡ ಶುರುವಾಗಿದೆ.

2 / 8
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಕಳೆದ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಆದರೆ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಅಷ್ಟೇ ಅಲ್ಲದೆ ಕೇವಲ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿತ್ತು.

3 / 8
ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರ ನಾಯಕತ್ವದ ಗುಣಗಳ ಬಗ್ಗೆ ಪ್ರಶ್ನೆಗಳೆದಿದ್ದವು. ಅದರಲ್ಲೂ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ನಡೆಸಿಕೊಂಡ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಹೀಗಾಗಿಯೇ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

4 / 8
ಇದೀಗ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ತಂಡದಲ್ಲೇ ಉಳಿಸಿಕೊಳ್ಳಬೇಕಿದ್ದರೆ ನಾಯಕ ಬದಲಾಗಬೇಕಿರುವುದು ಅನಿವಾರ್ಯ. ಏಕೆಂದರೆ ಹಿಟ್​ಮ್ಯಾನ್ ಕಳೆದ ಬಾರಿಯ ಕಹಿ ಘಟನೆಯನ್ನು ಮರೆಯಬೇಕಿದ್ದರೆ ಅವರ ಆಪ್ತರೊಬ್ಬರಿಗೆ ನಾಯಕತ್ವ ನೀಡಬೇಕಾಗಿ ಬರಬಹುದು. ಇಲ್ಲಿ ರೋಹಿತ್ ಶರ್ಮಾ ಅವರ ಅತ್ಯಾಪ್ತರು ಯಾರೆಂದರೆ ಅದು ಸೂರ್ಯಕುಮಾರ್ ಯಾದವ್.

5 / 8
ಈಗಾಗಲೇ ಟೀಮ್ ಇಂಡಿಯಾದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಅತ್ತ ಸೂರ್ಯನಿಗೆ ಕ್ಯಾಪ್ಟನ್ ಪಟ್ಟ ನೀಡಿದರೆ, ರೋಹಿತ್ ಶರ್ಮಾ ಮುಂಬೈ ಬಳಗದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಐಪಿಎಲ್​ 2025 ರಲ್ಲಿ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

6 / 8
ಈ ಬಗ್ಗೆ ಮಾತನಾಡಿರುವ ಸೂರ್ಯಕುಮಾರ್ ಯಾದವ್ ಕೂಡ ಅಡ್ಡ ಗೋಡೆಯ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್​ಗೆ ನೀವು ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಲು ಬಯಸುತ್ತೀರಾ ಎಂಬ ಪ್ರಶ್ನೆಯನ್ನು ಕೇಳಲಾಗಿದೆ.

7 / 8
ಇದಕ್ಕೆ ಉತ್ತರಿಸಿದ ಸೂರ್ಯಕುಮಾರ್ ಯಾದವ್, ನಾನು ಟೀಮ್ ಇಂಡಿಯಾದ ನಾಯಕತ್ವವನ್ನು ಆನಂದಿಸುತ್ತಿದ್ದೇನೆ. ಮುಂಬೈ ಇಂಡಿಯನ್ಸ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡುವಾಗ ನಾನು ಸಹ ಸಲಹೆಗಳನ್ನು ನೀಡುತ್ತಿದ್ದೆ. ಅಲ್ಲದೆ ಶ್ರೀಲಂಕಾ ಹಾಗೂ ಸೌತ್ ಆಫ್ರಿಕಾ ಸರಣಿಗಳಲ್ಲೂ ನಾನು ಯಶಸ್ವಿಯಾಗಿ ಭಾರತ ತಂಡವನ್ನು ಮುನ್ನಡೆಸಿದ್ದೇನೆ. ತಂಡವನ್ನು ಹೇಗೆ ಮುನ್ನಡೆಸಬೇಕು ಎಂಬುದನ್ನು ನಾನು ಇತರೆ ನಾಯಕರಿಂದ ಕಲಿತಿದ್ದೇನೆ ಎಂದು ತಿಳಿಸಿದರು.

8 / 8
ಅಲ್ಲದೆ ಐಪಿಎಲ್​ ನಾಯಕರಾಗುತ್ತೀರಾ ಎಂಬ ಪ್ರಶ್ನೆಗೆ... ಮುಂದೆ ನೋಡೋಣ, ಶೀಘ್ರದಲ್ಲೇ ನಿಮಗೆ ನಾಯಕ ಯಾರೆಂಬುದು ತಿಳಿಯಲಿದೆ ಎಂದು ಉತ್ತರಿಸಿದರು. ಇದಾಗ್ಯೂ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಅವರೇ ಮುನ್ನಡೆಸಲಿದ್ದಾರೆ ಎಂಬುದನ್ನು ಎಲ್ಲೂ ಸಹ ಪ್ರಸ್ತಾಪಿಸಿಲ್ಲ. ಹೀಗಾಗಿಯೇ ಐಪಿಎಲ್​ 2025 ರಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸೂರ್ಯಕುಮಾರ್​ ಯಾದವ್​ಗೆ ಕ್ಯಾಪ್ಟನ್ ಪಟ್ಟ ಕಟ್ಟಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸೂರ್ಯಕುಮಾರ್ ಹೇಳಿದಂತೆ ಈ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ.