IPL 2025: ಸೂರ್ಯಕುಮಾರ್ ಯಾದವ್ನ ಉಳಿಸಿಕೊಳ್ಳಲು ಕಸರತ್ತು ಶುರು..!
IPL 2025: ಐಪಿಎಲ್ 2025 ರ ಆವೃತ್ತಿಗಾಗಿ ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಫ್ರಾಂಚೈಸಿಗಳಿಗೆ ಕೆಲವೇ ಕೆಲವು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಆದರೆ ಹೀಗೆ ರಿಟೈನ್ ಮಾಡಿಕೊಳ್ಳಲು ಆಟಗಾರರಿಗೆ ನಿರ್ದಿಷ್ಟ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಹೀಗಾಗಿಯೇ ಕೆಲ ಆಟಗಾರರು ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಸೂರ್ಯಕುಮಾರ್ ಯಾದವ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಕುತೂಹಲ. ಏಕೆಂದರೆ ಮುಂಬೈ ಇಂಡಿಯನ್ಸ್ ದಾಂಡಿಗನಿಗೆ ಈಗಾಗಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಕೋಟಿ ಮೊತ್ತದ ಆಫರ್ ನೀಡಿದೆ. ಈ ಆಫರ್ನೊಂದಿಗೆ ನಾಯಕತ್ವವನ್ನೂ ಸಹ ನೀಡುವಾಗಿ ಕೆಕೆಆರ್ ಹೇಳಿಕೊಂಡಿದೆ ಎಂದು ವರದಿಯಾಗಿದೆ.
2 / 6
ಹೀಗಾಗಿಯೇ ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಸೂರ್ಯನನ್ನು ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಸರತ್ತು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಸೀಸನ್ನಲ್ಲೂ ಸ್ಕೈ ಎಂಐ ತಂಡದ ಪರವೇ ಆಡಲಿದ್ದಾರೆ ಎಂದು ತಿಳಿಸಿದ್ದಾರೆ.
3 / 6
ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬರಲಿದ್ದಾರಾ ಎಂಬುದರ ಸ್ಪಷ್ಟನೆಗಾಗಿ ಸ್ಪೋರ್ಟ್ಸ್ ತಕ್ ಚಾನೆಲ್ನವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮೂಲದವನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಸೂರ್ಯಕುಮಾರ್ ಅವರನ್ನು ರಿಟೈನ್ ಮಾಡಿಕೊಳ್ಳಲು ಬಯಸುತ್ತಿರುವುದಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
4 / 6
ಇದಾಗ್ಯೂ ಸೂರ್ಯಕುಮಾರ್ ಯಾದವ್ ಅವರು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರಾ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದೇವೆ. ಸದ್ಯ ಕೇಳಿ ಬರುತ್ತಿರುವುದು ಕೇವಲ ಊಹಾಪೋಹಗಳಷ್ಟೇ. ಅವರು ಇನ್ನೂ ಸಹ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.
5 / 6
ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವುದು ಕೇವಲ 8 ಕೋಟಿ ರೂ. ಮಾತ್ರ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಬಾರಿ ಮುಂಬೈ ಫ್ರಾಂಚೈಸಿಯು ಸೂರ್ಯನನ್ನು ರಿಟೈನ್ ಮಾಡಿಕೊಳ್ಳಬೇಕಿದ್ದರೆ ಬೃಹತ್ ಮೊತ್ತ ಪಾವತಿಸಲೇಬೇಕಾಗುತ್ತದೆ. ಆದರೆ ಅತ್ತ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬುಮ್ರಾ ಕೂಡ ಹೆಚ್ಚಿನ ಮೊತ್ತದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ರಿಟೈನ್ ಮಾಡಿಕೊಳ್ಳುವುದೇ ಈಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಿರುವ ದೊಡ್ಡ ಸವಾಲು.
6 / 6
ಏಕೆಂದರೆ ಸೂರ್ಯಕುಮಾರ್ ಯಾದವ್ ಈಗಾಗಲೇ ಮುಂಬೈ ಇಂಡಿಯನ್ಸ್ ಪರ 9 ಸೀಸನ್ಗಳನ್ನು ಆಡಿದ್ದಾರೆ. ಇದಾಗ್ಯೂ ಅವರ ಸಂಭಾವನೆ 10 ಕೋಟಿ ರೂ. ತಲುಪಿಲ್ಲ. ಇದೇ ವೇಳೆ ಇಶಾನ್ ಕಿಶನ್ ಸೇರಿದಂತೆ ಯುವ ಆಟಗಾರರು 10 ರಿಂದ 15 ಕೋಟಿ ರೂ. ಪಡೆಯುತ್ತಿದ್ದಾರೆ. ಹೀಗಾಗಿಯೇ ಬೃಹತ್ ಮೊತ್ತ ಸಿಗದಿದ್ದರೆ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬರಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಈ ಬಾರಿಯ ಮೆಗಾ ಹರಾಜಿನಲ್ಲಿ ಸ್ಕೈ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.