AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

Suryakumar Yadav: ಮುಂಬೈ ಇಂಡಿಯನ್ಸ್ ಪರ 9 ಸೀಸನ್​ಗಳಲ್ಲಿ ಕಣಕ್ಕಿಳಿದಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವ ಸಂಭಾವನೆ ಕೇವಲ 8 ಕೋಟಿ ರೂ. ಮಾತ್ರ. ಅದೇ ಇಶಾನ್ ಕಿಶನ್ ಸೇರಿದಂತೆ ಇತರೆ ಆಟಗಾರರು 10 ರಿಂದ 15 ಕೋಟಿ ರೂ. ಪಡೆಯುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಸೂರ್ಯ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Jul 23, 2024 | 8:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿಗೂ ಮುನ್ನ ಕೆಲ ಬಿಗ್ ಅಪ್​ಡೇಟ್​ಗಳು ಹೊರಬೀಳುತ್ತಿವೆ. ಈ ಅಪ್​ಡೇಟ್​ಗಳಲ್ಲಿ ಪ್ರಮುಖವಾದವು ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಮುಂದಿನ ನಡೆ. ಅಂದರೆ ಐಪಿಎಲ್ 2025 ರಲ್ಲಿ ಸೂರ್ಯ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲ್ಲ ಎಂದು ಹೇಳಲಾಗುತ್ತಿದೆ.

1 / 5
ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬರಲು ನಿರ್ಧರಿಸಿದ್ದು, ಅದರಂತೆ ಮುಂದಿನ ಸೀಸನ್​​ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಒಂದು ಕಾರಣ ಕಳೆದ ಸೀಸನ್​ನಲ್ಲಿ ಮುಂಬೈ ಫ್ರಾಂಚೈಸಿ ಸೂರ್ಯನನ್ನು ಸೈಡ್​ಗಿರಿಸಿದ್ದು. ಅಂದರೆ ರೋಹಿತ್ ಶರ್ಮಾ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಸಾರಥ್ಯ ತನಗೆ ಸಿಗಲಿದೆ ಎಂದು ಸೂರ್ಯಕುಮಾರ್ ಭಾವಿಸಿದ್ದರು.

2 / 5
ಆದರೆ ಮುಂಬೈ ಇಂಡಿಯನ್ಸ್ ತಂಡದಿಂದ ಹೊರನಡೆದಿದ್ದ ಹಾರ್ದಿಕ್ ಪಾಂಡ್ಯರನ್ನು ಮತ್ತೆ ತಂಡಕ್ಕೆ ಕರೆತರುವ ಮೂಲಕ ನಾಯಕತ್ವ ನೀಡಲಾಗಿತ್ತು. ಫ್ರಾಂಚೈಸಿಯ ಈ ನಿರ್ಧಾರದಿಂದ ಸೂರ್ಯಕುಮಾರ್ ಅವರಲ್ಲಿ ಅಸಮಾಧಾನವಿದೆ. ಇದೇ ಕಾರಣದಿಂದಾಗಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ರಿಟೈನ್ ಆಗದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಇತ್ತ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಹೊಸ ನಾಯಕರುಗಳ ಆಯ್ಕೆಗೆ ಆಸಕ್ತಿ ಹೊಂದಿವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಹೊಸ ತಂಡವೊಂದಕ್ಕೆ ನಾಯಕರಾಗಿ ಆಯ್ಕೆಯಾಗುವುದು ಖಚಿತ ಎನ್ನಬಹುದು.

4 / 5
ಇದೇ ಕಾರಣದಿಂದಾಗಿ ಇದೀಗ ಸೂರ್ಯಕುಮಾರ್ ಯಾದವ್ ಬೃಹತ್ ಮೊತ್ತದ ಬಿಡ್ಡಿಂಗ್​ನೊಂದಿಗೆ ಹೊಸ ತಂಡದ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಸೂರ್ಯ ಮುಂಬೈ ಇಂಡಿಯನ್ಸ್​ ತಂಡದಿಂದ ಹೊರಬಂದು, ಹೊಸ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ