AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅತೀ ಕಡಿಮೆ ಮೂಲ ಬೆಲೆ: ಐಪಿಎಲ್​ಗೆ ಆಯ್ಕೆಯಾದರೆ ಹೊಸ ಇತಿಹಾಸ

IPL 2025: ಮುಂಬೈ ಮೂಲದ ಸೌರಭ್ ನೇತ್ರವಾಲ್ಕರ್ ಈ ಹಿಂದೆ ಭಾರತದ ಪರ ಅಂಡರ್-19 ವಿಶ್ವಕಪ್ ಆಡಿದ್ದರು. ಇದಾದ ಬಳಿಕ ಯುಎಸ್​ಎಗೆ ವಲಸೆ ಹೋಗಿದ್ದ ಅವರು ಇದೀಗ ಅಲ್ಲಿನ ರಾಷ್ಟ್ರೀಯ ತಂಡದ ಖಾಯಂ ಸದಸ್ಯರಾಗಿದ್ದಾರೆ. ಅದರಂತೆ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸೌರಭ್ ನೇತ್ರವಾಲ್ಕರ್ ಐಪಿಎಲ್ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 10, 2024 | 8:35 AM

Share
ಸೌರಭ್ ನೇತ್ರವಾಲ್ಕರ್... ಈ ಹೆಸರು ಭಾರತೀಯರಿಗೆ ಚಿರಪರಿಚಿತ. ಏಕೆಂದರೆ ಕಳೆದ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಕೆಟ್​ ಕಬಳಿಸುವ ಮೂಲಕ ಭಾರತೀಯ ಮೂಲದ ಯುಎಸ್​ಎ ವೇಗಿ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೆ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನದೊಂದಿಗೆ ಮಿಂಚಿದ್ದರು. ಇದೀಗ ಇದೇ ಸೌರಭ್ ನೇತ್ರವಾಲ್ಕರ್ ಐಪಿಎಲ್​ಗೆ ಎಂಟ್ರಿ ಕೊಡಲು ತುದಿಗಾಲಲ್ಲಿ ನಿಂತಿದ್ದಾರೆ.

1 / 5
ಇದರ ಮೊದಲ ಹೆಜ್ಜೆಯಾಗಿ ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಸೌರಭ್ ನೇತ್ರವಾಲ್ಕರ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ. ಅಂದರೆ ಚೊಚ್ಚಲ ಐಪಿಎಲ್ ಅವಕಾಶವನ್ನು ಎದುರು ನೋಡುತ್ತಿರುವ ಸೌರಭ್ ಅತೀ ಕಡಿಮೆ ಬೇಸ್ ಪ್ರೈಸ್​ನೊಂದಿಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ.

2 / 5
ಈಗಾಗಲೇ ಯುಎಸ್​ಎ ಪರ 36 ಟಿ20 ಪಂದ್ಯಗಳನ್ನಾಡಿರುವ ಸೌರಭ್ ನೇತ್ರವಾಲ್ಕರ್ 36 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಎಡಗೈ ವೇಗದ ಬೌಲಿಂಗ್ ಮೂಲಕ ಬ್ಯಾಟರ್​ಗಳನ್ನು ಇಕ್ಕಟಿಗೆ ಸಿಲುಕಿಸುವಲ್ಲಿ ನಿಸ್ಸೀಮರಾಗಿ ಗುರುತಿಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 36 ಪಂದ್ಯಗಳಲ್ಲಿ ಕೇವಲ 6.71 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿರುವುದು.

3 / 5
ಇದೀಗ ಐಪಿಎಲ್ ಅಂಗಳಕ್ಕೆ ಕಾಲಿಡಲು ಸಜ್ಜಾಗಿರುವ ಸೌರಭ್ ನೇತ್ರವಾಲ್ಕರ್ ಅವರ ಮೇಲೆ ಒಂದಷ್ಟು ಫ್ರಾಂಚೈಸಿಗಳು ಕಣ್ಣಿಟ್ಟಿರುವುದು ಸುಳ್ಳಲ್ಲ. ಅದರಲ್ಲೂ ಅತೀ ಕಡಿಮೆ ಮೂಲ ಬೆಲೆ ಘೋಷಿಸಿರುವ ಕಾರಣ ಅವರನ್ನು ಯಾವುದಾದರೂ ಫ್ರಾಂಚೈಸಿ ಬ್ಯಾಕ್ ಅಪ್ ಬೌಲರ್ ಆಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.

4 / 5
ಒಂದು ವೇಳೆ ಸೌರಭ್ ನೇತ್ರವಾಲ್ಕರ್ ಐಪಿಎಲ್ ಮೆಗಾ ಹರಾಜಿನ ಮೂಲಕ ಆಯ್ಕೆಯಾದರೆ ಹೊಸ ಇತಿಹಾಸ ಕೂಡ ನಿರ್ಮಾಣವಾಗಲಿದೆ. ಏಕೆಂದರೆ ಐಪಿಎಲ್ ಇತಿಹಾಸದಲ್ಲಿ  ಯುಎಸ್​ಎ ತಂಡದ ಯಾವುದೇ ಆಟಗಾರ ಹರಾಜಿನ ಮೂಲಕ ಆಯ್ಕೆಯಾಗಿಲ್ಲ. ಹೀಗಾಗಿ ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಹರಾಜಿನ ಮೂಲಕ ಸೌರಭ್ ನೇತ್ರವಾಲ್ಕರ್ ಹೆಸರು ಇತಿಹಾಸ ಪುಟಕ್ಕೆ ಸೇರ್ಪಡೆಯಾಗಲಿದೆಯಾ ಕಾದು ನೋಡಬೇಕಿದೆ.

5 / 5
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ