- Kannada News Photo gallery Cricket photos IPL 2025: Virat Kohli is the highest paid Indian In IPL history
Virat Kohli: 21 ಕೋಟಿಯೊಂದಿಗೆ ಹೊಸ ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ
IPL 2025 Virat Kohli: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಅತ್ಯಧಿಕ ಸಂಭಾವನೆ ಪಡೆದ ಭಾರತೀಯ ಆಟಗಾರರಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ಆರ್ಸಿಬಿ ಫ್ರಾಂಚೈಸಿ ಉಳಿಸಿಕೊಂಡಿದೆ. ಈ 21 ಕೋಟಿಯೊಂದಿಗೆ ಕೊಹ್ಲಿಯ ಒಟ್ಟು ಐಪಿಎಲ್ ಸಂಭಾವನೆ 200 ಕೋಟಿ ರೂ. ದಾಟಿದೆ.
Updated on: Nov 02, 2024 | 9:09 AM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿಯೇ ಇತ್ತು. 2021 ರಲ್ಲಿ ಕೊಹ್ಲಿಯನ್ನು ಆರ್ಸಿಬಿ 17 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದರು. ಆದರೆ ಈ ಬಾರಿ 21 ಕೋಟಿ ರೂ. ಪಡೆಯುವ ಮೂಲಕ ಐಪಿಎಲ್ನಲ್ಲಿ ಇಪ್ಪತ್ತು ಕೋಟಿಗೂ ಅಧಿಕ ಮೊತ್ತ ಪಡೆದ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಹಾಗೆಯೇ ಈ 21 ಕೋಟಿ ರೂ.ನೊಂದಿಗೆ ವಿರಾಟ್ ಕೊಹ್ಲಿಯ ಒಟ್ಟು ಐಪಿಎಲ್ ಗಳಿಕೆಯು 200 ಕೋಟಿ ರೂ. ದಾಟಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಈಗಲೂ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ರೋಹಿತ್ ಶರ್ಮಾ 18 ಸೀಸನ್ಗಳಿಂದ ಒಟ್ಟು 210.9 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

ಇದೀಗ ವಿರಾಟ್ ಕೊಹ್ಲಿ 209.2 ಕೋಟಿ ರೂ.ನೊಂದಿಗೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿ ಪರ ಕಣಕ್ಕಿಳಿದು 209 ಕೋಟಿ ರೂ.ಗೂ ಅಧಿಕ ಮೊತ್ತ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರದ್ದು. ಅಂದರೆ 2008 ರಿಂದ 2024 ರವರೆಗೆ ವಿರಾಟ್ ಕೊಹ್ಲಿ ಆರ್ಸಿಬಿ ಫ್ರಾಂಚೈಸಿ ಪರ ಕಣಕ್ಕಿಳಿದಿದ್ದಾರೆ. ಈ ಮೂಲಕ ಹರಾಜಿನಲ್ಲಿ ಕಾಣಿಸಿಕೊಳ್ಳದೇ ಅತ್ಯಧಿಕ ಸಂಭಾವನೆ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.
