Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ (ಐಪಿಎಲ್ 2025) ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಏಕೆಂದರೆ ವಿರಾಟ್ ಕೊಹ್ಲಿ ಈಗ ಯಾವುದೇ ತಂಡದ ನಾಯಕರಾಗಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಮತ್ತೆ ಆರ್​ಸಿಬಿ ಬಳಗವನ್ನು ಮುನ್ನಡೆಸಲು ಅವರು ತುದಿಗಾಲಲ್ಲಿ ನಿಂತಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 30, 2024 | 7:31 AM

IPL 2025: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

1 / 7
ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 40 ವರ್ಷ. ಹೀಗಾಗಿ ಆರ್​ಸಿಬಿ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ.

2 / 7
ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

3 / 7
ಇದೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೂ ವಿದಾಯ ಹೇಳಿದ್ದಾರೆ. ಅತ್ತ ಟಿ20 ಮಾದರಿಗೆ ನಿವೃತ್ತಿ ಘೋಷಿಸಿರುವ ಕಾರಣ, ವಿರಾಟ್ ಕೊಹ್ಲಿ ಆರ್​ಸಿಬಿ ಪರ ಸಂಪೂರ್ಣ ತೊಡಗಿಸಿಕೊಳ್ಳಬಹುದು.

4 / 7
ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್​ಇನ್​ಫೋ ಮೂಲಗಳು ತಿಳಿಸಿವೆ.

5 / 7
ಈಗಾಗಲೇ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಕಿಂಗ್ ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 7
RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ.

7 / 7
Follow us