IPL 2025: 3 ವರ್ಷಗಳಲ್ಲಿ ಕಪ್: ನಿವೃತ್ತಿ ಸುಳಿವು ನೀಡಿದ ವಿರಾಟ್ ಕೊಹ್ಲಿ

IPL 2025 RCB: ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೂವರನ್ನು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಗೆ 21 ಕೋಟಿ ರೂ. ನೀಡಲಾಗಿದ್ದರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಿದ್ದಾರೆ. ಇನ್ನು ಯಶ್ ದಯಾಳ್​ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 03, 2024 | 10:33 AM

17 ವರ್ಷ, 17 ಸೀಸನ್​, ಒಂದೇ ತಂಡ, ಒಂದೇ ಗುರಿ... ಇದುವೇ ವಿರಾಟ್ ಕೊಹ್ಲಿಯ ಬಹುದೊಡ್ಡ ಕನಸು. ಹೌದು, ಕಳೆದ ಹದಿನೇಳು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಇದೀಗ 18ನೇ ಆವೃತ್ತಿಗಾಗಿ ಸಜ್ಜಾಗಿ ನಿಂತಿದ್ದಾರೆ. ಅದು ಸಹ ಈ ಸಲ ಆದರೂ ಕಪ್ ಗೆಲ್ಲಬೇಕೆಂಬ ಮಹದಾಸೆಯೊಂದಿಗೆ ಎಂಬುದು ವಿಶೇಷ.

1 / 5
ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 21 ಕೋಟಿ ರೂ. ನೀಡಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ಆರ್​ಸಿಬಿ ಪರ 18ನೇ ಸೀಸನ್ ಆಡುವುದು ಕೂಡ ಖಚಿತವಾಗಿದೆ. ಅಷ್ಟೇ ಅಲ್ಲದೆ ಮುಂದಿನ ಮೂರು ಆವೃತ್ತಿಗಳಲ್ಲೂ ಅವರು ಬೆಂಗಳೂರು ಫ್ರಾಂಚೈಸಿಯಲ್ಲೇ ಉಳಿಯಲಿದ್ದಾರೆ. ಇದನ್ನು ಖುದ್ದು ವಿರಾಟ್ ಕೊಹ್ಲಿಯೇ ಖಚಿತಪಡಿಸಿದ್ದಾರೆ.

2 / 5
ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ, ಒಂದು ತಂಡಕ್ಕಾಗಿ ಇಷ್ಟು ವರ್ಷ ಆಡಲಿದ್ದೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಆದರೆ ಈ ಸಂಬಂಧವು ಹಲವು ವರ್ಷಗಳಿಂದ ಮುಂದುವರೆದಿದೆ. ಇದು ನಿಜಕ್ಕೂ ನನ್ನ ಪಾಲಿಗೆ ತುಂಬಾ ವಿಶೇಷ ಅನುಭವ. ನನ್ನ ವೃತ್ತಿಜೀವನದ ಅಂತ್ಯದ ವೇಳೆಗೆ 20 ವರ್ಷಗಳು ಪೂರ್ಣಗೊಳ್ಳಲಿದೆ. ಈ 20 ವರ್ಷಗಳನ್ನು ನಾನು ಆರ್​ಸಿಬಿ ಪರವಾಗಿಯೇ ಕಣಕ್ಕಿಳಿಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

3 / 5
ಅಂದರೆ ವಿರಾಟ್ ಕೊಹ್ಲಿ ಐಪಿಎಲ್ 2027ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆದರೆ ಆ ಬಳಿಕ ಅವರು ನಿವೃತ್ತಿ ನೀಡುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ವೃತ್ತಿಜೀವನದ ಅಂತ್ಯದ ವೇಳೆಗೆ 20 ವರ್ಷಗಳನ್ನು ಪೂರ್ಣಗೊಳಿಸಲಿದ್ದೇನೆ ಎಂದು ಒತ್ತಿ ಹೇಳಿದ್ದಾರೆ.

4 / 5
35 ವರ್ಷದ ವಿರಾಟ್ ಕೊಹ್ಲಿಗೆ 2027ರ ವೇಳೆಗೆ 38 ವರ್ಷ ತುಂಬಲಿದೆ. ಇದೇ ಅವಧಿಯಲ್ಲಿ ಕಿಂಗ್ ಕೊಹ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ. ಹೀಗಾಗಿಯೇ ಮುಂದಿನ ಮೂರು ವರ್ಷಗಳಲ್ಲಿ ಆರ್​ಸಿಬಿಗೆ ಕಪ್ ಗೆದ್ದುಕೊಡಬೇಕೆಂಬ ಮಹದಾಸೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಈ ಮೂಲಕ ತಮ್ಮ 17 ವರ್ಷಗಳ ಕನಸನ್ನು ನನಸು ಮಾಡಿಕೊಳ್ಳುವ ಇರಾದೆಯಲ್ಲಿದ್ದಾರೆ. ಕಿಂಗ್ ಕೊಹ್ಲಿಯ ಈ ಕನಸು ಐಪಿಎಲ್ 2025 ರಲ್ಲೇ ನನಸಾಗಲಿದೆಯಾ ಕಾದು ನೋಡಬೇಕಿದೆ.

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ