Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಹರಾಜಿನಲ್ಲಿ 13 ವರ್ಷದ ಬಾಲಕ: ಯಾರು ಈ ಸೂರ್ಯವಂಶಿ?

IPL 2025 - Vaibhav Suryavanshi: ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ. ಕೇವಲ 13ನೇ ವಯಸ್ಸಿನಲ್ಲಿ ವೈಭವ್ ಐಪಿಎಲ್ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಒಂದು ವೇಳೆ ಅವರನ್ನು ಯಾವುದಾದರೂ ಫ್ರಾಂಚೈಸಿ ಖರೀದಿಸಿದರೆ, ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಝಾಹಿರ್ ಯೂಸುಫ್
|

Updated on: Nov 17, 2024 | 11:53 AM

IPL 2025: ಐಪಿಎಲ್ ಮೆಗಾ ಹರಾಜಿಗಾಗಿ 574 ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ಪಟ್ಟಿಯಲ್ಲಿ 366 ಭಾರತೀಯ ಆಟಗಾರರಿದ್ದಾರೆ. ಇವರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ಆದರೆ ವೈಭವ್ ಸುದ್ದಿಯಾಗಲು ಮುಖ್ಯ ಕಾರಣ ಅವರ ವಯಸ್ಸು. ಅಂದರೆ ಕೇವಲ 13 ವರ್ಷದ ಆಟಗಾರ ಐಪಿಎಲ್ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

1 / 6
ಇದರ ಬೆನ್ನಲ್ಲೇ ಯಾರು ಈ ವೈಭವ್ ಸೂರ್ಯವಂಶಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರವಾಗಿ ಸಾಲು ಸಾಲು ಸಾಧನೆಗಳ ಪಟ್ಟಿಯೊಂದು ತೆರೆದುಕೊಳ್ಳುತ್ತದೆ. ಈ ಸಾಧನೆಗಳ ಫಲವಾಗಿಯೇ ಇದೀಗ 13 ವರ್ಷದ ವೈಭವ್ ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

2 / 6
ಅಂದಹಾಗೆ ವೈಭವ್ ಸೂರ್ಯವಂಶಿ ಬಿಹಾರ ಮೂಲದ ಕ್ರಿಕೆಟಿಗ. 5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್ 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು ಎಂದರೆ ನಂಬಲೇಬೇಕು. ಅಲ್ಲದೆ ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ತಮ್ಮ 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.

3 / 6
2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ವೈಭವ್ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದರು.

4 / 6
ಹಾಗೆಯೇ ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಬಾರಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

5 / 6
ಹೀಗೆ ಹಲವು ಟೂರ್ನಿಗಳಲ್ಲಿ ಕಣಕ್ಕಿಳಿದಿರುವ 13 ವರ್ಷದ ವೈಭವ್ ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಈ ಭರ್ಜರಿ ಪ್ರದರ್ಶನದ ಫಲವಾಗಿಯೇ ಇದೀಗ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಈ ಪಟ್ಟಿಯಿಂದ ಅವರ ಹೆಸರು ಐಪಿಎಲ್ ತಂಡಗಳಲ್ಲಿ ಕಾಣಿಸಿಕೊಳ್ಳಿದೆಯಾ ಎಂಬುದು ನವೆಂಬರ್ 24 ಅಥವಾ 25 ರಂದು ನಿರ್ಧಾರವಾಗಲಿದೆ.

6 / 6
Follow us
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ

Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು