AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂತ್ ನಡೆ ಎತ್ತ ಕಡೆ

IPL 2025 Rishabh Pant: ರಿಷಭ್ ಪಂತ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ. ಏಕೆಂದರೆ ಪಂತ್ ಅವರ ಆಯ್ಕೆಯಿಂದ ವಿಕೆಟ್ ಕೀಪರ್, ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ನಾಯಕನ ಸ್ಥಾನವನ್ನು ತುಂಬಬಹುದು. ಹೀಗಾಗಿಯೇ ರಿಷಭ್ ಅವರ ಪ್ರಸ್ತುತ ನಡೆ ಈಗ ಕುತೂಹಲಕ್ಕೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Oct 24, 2024 | 8:23 AM

Share
IPL 2025: ಐಪಿಎಲ್ ಆಟಗಾರರ ರಿಟೈನ್ ದಿನಾಂಕ ಸಮೀಪಿಸುತ್ತಿದ್ದಂತೆ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ಈ ಅಪ್​ಡೇಟ್ ಪ್ರಕಾರ, ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರಲಿದ್ದಾರೆ. ಅಂದರೆ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪಂತ್ ನಿರ್ಧರಿಸಿದ್ದಾರಂತೆ.

1 / 6
ಆದರೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲು ಮುಂದಾಗಿರುವುದೇಕೆ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಕೆಲ ಫ್ರಾಂಚೈಸಿಗಳಿಂದ ಪಂತ್​ ಬಂದಿರುವ ಬಿಗ್ ಆಫರ್​ಗಳು. ಹೀಗೆ ಎಡಗೈ ದಾಂಡಿಗನ ಮೇಲೆ ಕಣ್ಣಿಟ್ಟಿರುವ ಫ್ರಾಂಚೈಸಿಗಳ ಪೈಕಿ ಅಗ್ರಸ್ಥಾನದಲ್ಲಿರುವುದ ಚೆನ್ನೈ ಸೂಪರ್ ಕಿಂಗ್ಸ್ ಎಂಬುದು ವಿಶೇಷ.

2 / 6
ಐಪಿಎಲ್ ಮೆಗಾ ಹರಾಜಿನ ಸುದ್ದಿಯ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಚೆನ್ನೈ ಸೂಪರ್ ಕಿಂಗ್ಸ್​ ಮಾತುಕತೆ ನಡೆಸಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ  ಅವರನ್ನು ನೇಮಿಸಿಕೊಳ್ಳಲು ಸಿಎಸ್​ಕೆ ಆಸಕ್ತಿವಹಿಸಿದ್ದು, ಹೀಗಾಗಿ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

3 / 6
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರುತ್ತಿರುವ ಸುದ್ದಿಯ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಾರ್ಗೆಟ್ ಲಿಸ್ಟ್​ನಲ್ಲೂ ರಿಷಭ್ ಪಂತ್ ಹೆಸರಿಸಿದೆ ಎಂದು ಸುದ್ದಿಯಾಗಿದೆ. ಅಂದರೆ ಇಲ್ಲಿ ಸಿಎಸ್​ಕೆ ಜೊತೆ ಆರ್​ಸಿಬಿ ಕೂಡ ರಿಷಭ್ ಪಂತ್ ಮೇಲೆ ಕಣ್ಣಿಟ್ಟಿರುವುದು ಖಚಿತವಾಗಿದೆ.

4 / 6
ಇದರ ನಡುವೆ ಪಂಜಾಬ್ ಕಿಂಗ್ಸ್ ಕೂಡ ಹೊಸ ನಾಯಕನ ಹುಡುಕಾಟಕ್ಕೆ ಇಳಿದಿದೆ. ಇಲ್ಲಿ ಪಂಜಾಬ್ ತಂಡದ ನೂತನ ಕೋಚ್ ಆಗಿ ರಿಕಿ ಪಾಂಟಿಂಗ್ ನೇಮಕವಾಗಿದ್ದಾರೆ. ಈ ಹಿಂದೆ ಪಾಂಟಿಂಗ್ ಕೋಚಿಂಗ್​ನಲ್ಲೇ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು ಎಂಬುದು ಉಲ್ಲೇಖಾರ್ಹ. ಅಂದರೆ ಪಂತ್ ಮೆಗಾ ಹರಾಜಿಗೆ ಬರುವುದನ್ನು ಪಂಜಾಬ್ ಕಿಂಗ್ಸ್ ಕೂಡ ಕಾಯುತ್ತಿರುವುದು ಸುಳ್ಳಲ್ಲ.

5 / 6
ಹೀಗಾಗಿ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಂಡರೆ ಮೂರು ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದಂತು ದಿಟ. ಇದಾಗ್ಯೂ ಅಂತಿಮವಾಗಿ ಪಂಟರ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ

ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ

ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ

3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ