ಈ ಮಾತುಕತೆಯ ಬೆನ್ನಲ್ಲೇ ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ ಸಂಜೀವ್ ಗೊಯೆಂಕಾ ರಾಹುಲ್ ಅವರನ್ನು ಕರೆಸಿಕೊಂಡು ಮಾತನಾಡಬೇಕಿದ್ದರೆ, ಇಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ. ಅದರಲ್ಲೂ ಕೆಎಲ್ಆರ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲು ಮುಂದಾಗಿದ್ದು, ಇದೇ ಕಾರಣದಿಂದಾಗಿ ಅವರ ಮನವೊಲಿಸಲು ಇದೀಗ LSG ಮಾಲೀಕರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.