IPL 2025: ಶಿಖರ್ ಧವನ್ ಐಪಿಎಲ್ ಆಡ್ತಾರಾ?
IPL 2025: ಐಪಿಎಲ್ನಲ್ಲಿ ಶಿಖರ್ ಧವನ್ ಈವರೆಗೆ 5 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಒಟ್ಟು 222 ಪಂದ್ಯಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ.
1 / 6
ಟೀಮ್ ಇಂಡಿಯಾದ ಎಡಗೈ ದಾಂಡಿಗ ಶಿಖರ್ ಧವನ್ (Shikhar Dhawan) ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಗಸ್ಟ್ 24 ರಂದು ಸೋಷಿಯಲ್ ಮೀಡಿಯಾ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ ಹಾಗೂ ಡೊಮೆಸ್ಟಿಕ್ ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದಾಗಿ ಧವನ್ ತಿಳಿಸಿದ್ದಾರೆ.
2 / 6
ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿಖರ್ ಧವನ್ ಮುಂಬರುವ ಐಪಿಎಲ್ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯದ ಉತ್ತರ ಆಡಬಹುದು ಅಥವಾ ಆಡದೇ ಇರಬಹುದು. ಏಕೆಂದರೆ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.
3 / 6
ಐಪಿಎಲ್ 2024 ರಲ್ಲಿ ಶಿಖರ್ ಧವನ್ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಕೇವಲ 5 ಪಂದ್ಯಗಳನ್ನಾಡಿದ್ದರು. ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಇದನ್ನು ಖುದ್ದು ಧವನ್ ಅವರೇ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
4 / 6
ಐಪಿಎಲ್ ವೇಳೆ ಉಂಟಾದ ಗಾಯದಿಂದ ನಾನು ಚೇತರಿಸಿಕೊಂಡಿದ್ದೇನೆ. ಆದರೆ 100 ಪರ್ಸೆಂಟ್ ಗುಣಮುಖನಾಗಿಲ್ಲ. ಸಂಪೂರ್ಣ ಫಿಟ್ನೆಸ್ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಅವರು ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
5 / 6
ಇನ್ನು ಮುಂಬರುವ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲು ಬಯಸಿದರೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಧವನ್ ಅವರಿಗೆ ಈಗ 38 ವರ್ಷಗಳು. ಅಲ್ಲದೆ ಫಿಟ್ನೆಸ್ ಸಮಸ್ಯೆಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಶಿಖರ್ ಧವನ್ ಅವರನ್ನು ರಿಲೀಸ್ ಮಾಡಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹೊಸ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.
6 / 6
ಶಿಖರ್ ಧವನ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 222 ಪಂದ್ಯಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ರನ್ ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.