IPL 2025: ಐಪಿಎಲ್ ಕಣದಲ್ಲಿದ್ದಾರೆ 13 ಕನ್ನಡಿಗರು
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ರಲ್ಲಿ ಕರ್ನಾಟಕದ 13 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಹದಿಮೂರು ಮಂದಿಯಲ್ಲಿ ಮೂವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ಹಾಗೂ ಆರ್ಸಿಬಿ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರು ಕಾಣಿಸಿಕೊಂಡಿದ್ದಾರೆ. ಇನ್ನುಳಿದ ತಂಡಗಳಲ್ಲಿರುವ ಕರ್ನಾಟಕದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...
Updated on: Mar 22, 2025 | 9:55 AM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 18ನೇ ಆವೃತ್ತಿಗೆ ಕೌಂಟ್ ಡೌನ್ ಶುರುವಾಗಿದೆ. ಇಂದಿನಿಂದ ಆರಂಭವಾಗಲಿರುವ ಐಪಿಎಲ್ನ ನೂತನ ಸೀಸನ್ನ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಕೆಲ ಕನ್ನಡಿಗರು ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಈ ಬಾರಿಯ ಐಪಿಎಲ್ನಲ್ಲಿ ಕರ್ನಾಟಕದ 13 ಪ್ಲೇಯರ್ಸ್ ಇದ್ದಾರೆ. ಆ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

ಕೆಎಲ್ ರಾಹುಲ್: ಈ ಬಾರಿಯ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಅದು ಕೂಡ ಬರೋಬ್ಬರಿ 14 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ.

ಪ್ರಸಿದ್ಧ್ ಕೃಷ್ಣ: 2 ಕೋಟಿ ರೂ. ಬೇಸ್ ಪ್ರೈಸ್ನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ 9.50 ಕೋಟಿ ರೂ. ನೀಡಿ ಖರೀದಿಸಿದೆ.

ಪ್ರವೀಣ್ ದುಬೆ: 30 ಲಕ್ಷ ರೂ. ಬೇಸ್ ಪ್ರೈಸ್ ಪಟ್ಟಿಯಲ್ಲಿದ್ದ ಕರ್ನಾಟಕದ ಸ್ಪಿನ್ನರ್ ಪ್ರವೀಣ್ ದುಬೆಯನ್ನು ಮೂಲ ಬೆಲೆಯೊಂದಿಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಲವ್ನೀತ್ ಸಿಸೋಡಿಯಾ: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಲವ್ನೀತ್ ಸಿಸೋಡಿಯಾ ಅವರ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಡದ ಪಾಲಾಗಿದ್ದಾರೆ.

ಮನ್ವಂತ್ ಕುಮಾರ್: 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿದ್ದ ಮನ್ವಂತ್ ಕುಮಾರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬೇಸ್ ಪ್ರೈಸ್ಗೆ ಖರೀದಿಸಿದೆ.

ಅಭಿನವ್ ಮನೋಹರ್: ಸ್ಪೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ಕರ್ನಾಟಕದ ಬಲಗೈ ದಾಂಡಿಗ ಅಭಿನವ್ ಮನೋಹರ್ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಅವರನ್ನು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 3.20 ಕೋಟಿ ರೂ. ನೀಡಿ ಖರೀದಿಸಿದೆ.

ಮನೀಶ್ ಪಾಂಡೆ: ಕಳೆದ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಮನೀಶ್ ಪಾಂಡೆಯನ್ನು 75 ಲಕ್ಷ ರೂ. ಮೂಲ ಬೆಲೆಗೆ ಕೆಕೆಆರ್ ಫ್ರಾಂಚೈಸಿ ಖರೀದಿಸಿದೆ.

ಶ್ರೇಯಸ್ ಗೋಪಾಲ್: 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕರ್ನಾಟಕದ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರು ಬೇಸ್ ಪ್ರೈಸ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ.

ಕರುಣ್ ನಾಯರ್: ಕರ್ನಾಟಕದ ಅನುಭವಿ ಆಟಗಾರ ಕರುಣ್ ನಾಯರ್ ಈ ಬಾರಿಯ ಮೆಗಾ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ಮೊತ್ತವನ್ನು 50 ಲಕ್ಷಕ್ಕೇರಿಸಿ ಕರುಣ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ.

ವೈಶಾಕ್ ವಿಜಯಕುಮಾರ್: ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿದ್ದ ವೈಶಾಕ್ ವಿಜಯಕುಮಾರ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ 1.80 ಕೋಟಿ ರೂ.ಗೆ ಖರೀದಿಸಿದೆ.

ಮನೋಜ್ ಭಾಂಡಗೆ: ಕಳೆದ ಎರಡು ಸೀಸನ್ಗಳಿಂದ ಆರ್ಸಿಬಿ ತಂಡದ ಭಾಗವಾಗಿರುವ ಮನೋಜ್ ಭಾಂಡಗೆಯನ್ನು ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಸಿದೆ. ಅದು ಕೂಡ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

ಶ್ರೀಜಿತ್ ಕೃಷ್ಣನ್: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಶ್ರೀಜಿತ್ ಕೃಷ್ಣನ್ ಅವರನ್ನು 30 ಲಕ್ಷ ರೂ. ಮೂಲ ಬೆಲೆಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ.

ದೇವದತ್ ಪಡಿಕ್ಕಲ್: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ದೇವದತ್ ಪಡಿಕ್ಕಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೇಸ್ ಪ್ರೈಸ್ಗೆ ಖರೀದಿಸಿದೆ.



















