AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025 DC vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 32ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 188 ರನ್​ಗಳಿಸಿ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸಿತು.

ಝಾಹಿರ್ ಯೂಸುಫ್
|

Updated on: Apr 17, 2025 | 9:04 AM

Share
IPL 2025: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 89  ರನ್ ಬಾರಿಸಿ ಮಿಂಚಿದ್ದ ಕನ್ನಡಿಗ ಕರುಣ್ ನಾಯರ್ (Karun Nair)  ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಮುಗ್ಗರಿಸಿದ್ದಾರೆ. ಅದು ಸಹ ತನ್ನದೇ ತಪ್ಪಿನಿಂದಾಗಿ ಎಂಬುದು ವಿಶೇಷ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್ ಮೆಕ್​ಗುರ್ಕ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು.

1 / 5
ಆದರೆ ಕೇವಲ 9 ರನ್ ಬಾರಿಸಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಮೂರನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಸ್ಟ್ರೈಕ್​ನಲ್ಲಿದ್ದ ಅಭಿಷೇಕ್ ಪೊರೆಲ್ ಓಡಬೇಡಿ ಎಂದರೂ ರನ್​ಗಾಗಿ ಕರುಣ್ ಕ್ರೀಸ್​ ಬಿಟ್ಟಿದ್ದರು.

2 / 5
ಸ್ಟ್ರೈಕ್​ನಲ್ಲಿದ್ದ ಬ್ಯಾಟರ್​ನ ಸೂಚನೆಯನ್ನು ನೋಡದೇ ಅವಸರದಲ್ಲಿ ಅದಾಗಲೇ ಕ್ರೀಸ್ ಬಿಟ್ಟಿದ್ದ ಕರುಣ್ ನಾಯರ್ ಮತ್ತೆ ನಾನ್ ಸ್ಟ್ರೈಕ್​ಗೆ ತಲುಪುವಷ್ಟರಲ್ಲಿ ಸಂದೀಪ್ ಶರ್ಮಾ ರನೌಟ್ ಮಾಡಿದರು. ಪರಿಣಾಮ ಶೂನ್ಯದೊಂದಿಗೆ ಕರುಣ್ ನಾಯರ್ ಪೆವಿಲಿಯನ್​​ಗೆ ಹಿಂತಿರುಗಬೇಕಾಯಿತು.

3 / 5
ಪೆವಿಲಿಯನ್​ನತ್ತ ಬಂದ ಕರುಣ್ ನಾಯರ್ ನೇರವಾಗಿ ಡ್ರೆಸ್ಸಿಂಗ್​ಗೆ ರೂಮ್​ಗೆ ತೆರಳಿದ್ದಾರೆ. ಅಲ್ಲದೆ ತನ್ನ ಕೋಪ ತಾಪಗಳನ್ನು ತೀರಿಸಿಕೊಂಡಿದ್ದಾರೆ. ತಾಳ್ಮೆ ಕಳೆದುಕೊಂಡು ಡ್ರೆಸ್ಸಿಂಗ್ ರೂಮ್​ನಲ್ಲಿ ತನ್ನ ಗ್ಲೌಸ್​, ಬ್ಯಾಟ್​ಗಳನ್ನು ಎಸೆಯುವ ಮೂಲಕ ಸಿಟ್ಟು ಹೊರಹಾಕುತ್ತಿರುವ ಕರುಣ್ ನಾಯರ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 188 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದಾರೆ. ಅದರಂತೆ ಸೂಪರ್ ಓವರ್​ನತ್ತ ಸಾಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಆರ್ 11 ರನ್ ಕಲೆಹಾಕಿದರೆ, ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ 13 ರನ್​ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ಪಂದವನ್ನು ಗೆದ್ದುಕೊಂಡಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ