- Kannada News Photo gallery Cricket photos IPL 2025: Karun Nair's duck Out's lucky for Mumbai Indians
IPL 2025: ಈ ಸಲ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್? ಹೀಗೊಂದು ಲೆಕ್ಕಾಚಾರ
IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ ದ್ವಿತೀಯ ಕ್ವಾಲಿಫೈಯರ್ ಪಂದ್ಯ ಇಂದು (ಜೂ.1) ನಡೆಯಲಿದೆ. ಅಹದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಮ್ಯಾಚ್ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನವೇ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ.
Updated on: Jun 01, 2025 | 8:00 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಗೇರಿದರೆ, ಅತ್ತ 2ನೇ ತಂಡವಾಗಿ ಫೈನಲ್ಗೇರಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿವೆ. ಅದರಂತೆ ಇಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ನಲ್ಲಿ ಆರ್ಸಿಬಿ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುಂಚೆಯೇ ಈ ಬಾರಿ ಕಪ್ ಮುಂಬೈ ಇಂಡಿಯನ್ಸ್ ತಂಡದ್ದು ಎಂಬ ಚರ್ಚೆಯೊಂದು ಮುನ್ನಲೆಗೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಕರುಣ್ ನಾಯರ್ ಅವರ ಡಕ್ ಔಟ್.

ಈ ಬಾರಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕರುಣ್ ನಾಯರ್ ಶೂನ್ಯಕ್ಕೆ ಔಟಾಗಿದ್ದರು. ಏಪ್ರಿಲ್ 16 ರಂದು ನಡೆದ ರಾಜಸ್ಥಾನ್ ರಾಯಲ್ ವಿರುದ್ಧದ ಪಂದ್ಯದಲ್ಲಿ ಕರುಣ್ ನಾಯರ್ ಡಕ್ ಔಟಾಗಿ ನಿರಾಸೆ ಮೂಡಿಸಿದ್ದರು. ಕರುಣ್ ಶೂನ್ಯಕ್ಕೆ ಔಟಾಗಿರುವುದೇ ಇದೀಗ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.

ಏಕೆಂದರೆ ಕರುಣ್ ನಾಯರ್ ಡಕ್ ಔಟ್ ಆದ ಸೀಸನ್ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಕೂಡ ಕರುಣ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದು, ಇದರ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಮುಂಬೈ ಇಂಡಿಯನ್ಸ್ ತಂಡಗಳು ಅಭಿಮಾನಿಗಳು.

ಕರುಣ್ ನಾಯರ್ ಐಪಿಎಲ್ನಲ್ಲಿ ಮೊದಲ ಬಾರಿಗೆ ಡಕ್ ಔಟ್ ಆಗಿದ್ದು 2013 ರಲ್ಲಿ. ಆ ವರ್ಷ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಶಸ್ವಿಯಾಗಿತ್ತು. ಇದಾದ ಬಳಿಕ ಅವರು 2ನೇ ಬಾರಿ 2017 ರಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆ ವರ್ಷ ಕೂಡ ಮುಂಬೈ ಇಂಡಿಯನ್ಸ್ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಅದರಂತೆ ಜೂನ್ 3 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಐಪಿಎಲ್ನ ಫೈನಲ್ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಮೇ 25 ರಂದು ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಐಪಿಎಲ್ನ ಫೈನಲ್ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಅರ್ಹತೆ ಪಡೆಯಲಿದೆಯಾ? ಕರುಣ್ ನಾಯರ್ ಡಕ್ ಔಟ್ ಲೆಕ್ಕಾಚಾರದಂತೆ ಹಾರ್ದಿಕ್ ಪಾಂಡ್ಯ ಪಡೆ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.









