- Kannada News Photo gallery Cricket photos IPL 2025: Kevin Pietersen joins Delhi Capitals as a mentor
IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ RCB ಮಾಜಿ ನಾಯಕ ಎಂಟ್ರಿ
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಐಪಿಎಲ್ಗೆ ರಿಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಮೆಂಟರ್ ಆಗಿ. 2009 ರಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದ ಪೀಟರ್ಸನ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾರ್ಗದರ್ಶಕರಾಗಿ ಆಯ್ಕೆಯಾಗಿದ್ದಾರೆ. ಅದರಂತೆ ಕೆಪಿ ಮುಂದಾಳತ್ವದಲ್ಲಿ ಈ ಬಾರಿ ಡೆಲ್ಲಿ ಪಡೆ ಭರ್ಜರಿ ಪ್ಲ್ಯಾನ್ ರೂಪಿಸಲಿದೆ.
Updated on: Mar 01, 2025 | 7:58 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ, ತಂಡಕ್ಕೆ ಹೊಸ ಮೆಂಟರ್ನ ಆಯ್ಕೆ ಮಾಡಿಕೊಂಡಿದೆ. ಹೀಗೆ ಮೆಂಟರ್ ಆಗಿ ಎಂಟ್ರಿ ಕೊಟ್ಟವರು ಮಾತ್ಯಾರೂ ಅಲ್ಲ, ಆರ್ಸಿಬಿ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್.

ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಐಪಿಎಲ್ನಲ್ಲಿ ಆರ್ಸಿಬಿ, ಡೆಲ್ಲಿ ಡೇರ್ ಡೆವಿಲ್ಸ್ (ಡೆಲ್ಲಿ ಕ್ಯಾಪಿಟಲ್ಸ್) ಹಾಗೂ ರೈಸಿಂಗ್ ಪುಣೆ ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ 2009 ರಲ್ಲಿ ಆರ್ಸಿಬಿ ಹಾಗೂ 2014 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕರಾಗಿಯೂ ಕಾಣಿಸಿಕೊಂಡಿದ್ದರು.

ಇದೀಗ 11 ವರ್ಷಗಳ ಹಿಂದೆ ನಾಯಕರಾಗಿ ಕಾಣಿಸಿಕೊಂಡ ಫ್ರಾಂಚೈಸಿ ಪರವೇ ಮೆಂಟರ್ ಆಗಿ ರಿಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅದರಂತೆ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್ ಬಳಗದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಐಪಿಎಲ್ನಲ್ಲಿ 36 ಪಂದ್ಯಗಳನ್ನಾಡಿರುವ ಕೆವಿನ್ ಪೀಟರ್ಸನ್ 1 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 1001 ರನ್ ಕಲೆಹಾಕಿದ್ದಾರೆ. ಹಾಗೆಯೇ ಇಂಗ್ಲೆಂಡ್ ಪರ 37 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಅರ್ಧಶತಕಗಳೊಂದಿಗೆ ಒಟ್ಟು 1176 ರನ್ ಬಾರಿಸಿದ್ದಾರೆ. ಈ ಅನುಭವದೊಂದಿಗೆ ಪೀಟರ್ಸನ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅದೃಷ್ಟ ಬದಲಿಸಲಿದ್ದಾರಾ ಕಾದು ನೋಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.



















